ಬ್ರೇಕಿಂಗ್ ನ್ಯೂಸ್
02-03-26 03:10 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್ ನಾಯಕ ಅಯತೊಲ್ಲಾ ಅಲ್ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಶಿಯಾ ಮುಸ್ಲಿಮರು ಭಾರೀ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದು ಪ್ರತಿಭಟನೆಗೆ ನಿರ್ಬಂಧ ವಿಧಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 15 ಲಕ್ಷಕ್ಕೂ ಹೆಚ್ಚು ಶಿಯಾ ಮುಸ್ಲಿಮರಿದ್ದಾರೆ.
ಕಾಶ್ಮೀರದಲ್ಲಿ ಹಲವು ಕಡೆ ಪ್ರತಿಭಟನೆಗೆ ನಿರ್ಬಂಧ ಹೇಳಲಾಗಿದೆ. ಅಲ್ಲದೆ,ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಘಂಟಾ ಘರ್ ನಲ್ಲಿ ಪೊಲೀಸರು ರಸ್ತೆಗೆ ಅಲ್ಲಲ್ಲಿ ತಡೆಬೇಲಿ ಹಾಕಿದ್ದಾರೆ. ನಗರದಲ್ಲಿ ಪ್ರತಿಭಟನೆ ತಪ್ಪಿಸಲು ಪೊಲೀಸ್ ಮತ್ತು ಸಿಆರ್ ಪಿಎಫ್ ನಿಯೋಜಿಸಲಾಗಿದೆ. ಖಮೇನಿ ಹತ್ಯೆ ಬಳಿಕ ಕಾಶ್ಮೀರದ ಅನಂತನಾಗ್, ಬುದ್ಗಾಂವ್, ಸೈದಾ ಕಡಲ್, ಲಾಲ್ ಚೌಕ, ಬಂಡೀಪುರ್, ಪುಲ್ವಾಮಾದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದವು.

ಪ್ರತಿಭಟನೆಗಿಳಿದ ಜನರು ತಮ್ಮ ಎದೆಗೆ ಚಾಟಿಯಿಂದ ಹೊಡೆಯುತ್ತ ಇಸ್ರೇಲ್- ಅಮೆರಿಕ ವಿರುದ್ಧ ಘೋಷಣೆ ಕೂಗಿದ್ದಾರೆ. ಇದೀಗ ಶಿಯಾ ಪ್ರಾಬಲ್ಯ ಇರುವಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ. ಲಾಲ್ ಚೌಕ್ ನಗರವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಇಂಟರ್ನೆಟ್ ವೇಗಕ್ಕೆ ನಿಯಂತ್ರಣ ಹೇರಲಾಗಿದ್ದು ವೈರಲ್ ವಿಡಿಯೋಗಳಿಂದ ಜನರು ಉದ್ರೇಕಗೊಳ್ಳದಂತೆ ತಡೆಯುವ ಕೆಲಸ ಮಾಡಿದ್ದಾರೆ. ಶ್ರೀನಗರದಲ್ಲಿಯೂ ನಿರ್ಬಂಧ ಹೇರಲಾಗಿದೆ. ಇದೇ ವೇಳೆ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರು ಕಾಶ್ಮೀರಿ ಜನರಿಗೆ ತಮ್ಮ ಶೋಕಾಚರಣೆ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.
ಮುತಾಹಿದ್ ಮಜ್ಲಿಸ್ ಉಲಮಾ ಸಂಘಟನೆ, ಮೆಹಬೂಬ ಮುಫ್ತಿ ಅವರ ಪಿಡಿಪಿ ಮುಷ್ಕರಕ್ಕೆ ಕರೆಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರು ನಿರ್ಬಂಧಗಳನ್ನು ವಿಧಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm