ಬ್ರೇಕಿಂಗ್ ನ್ಯೂಸ್
02-01-21 12:28 pm Headline Karnataka News Network ದೇಶ - ವಿದೇಶ
ಭೋಪಾಲ್, ಜ.2: ಮಧ್ಯಪ್ರದೇಶದ ಛತ್ತರ್ಪುರದ ಗ್ರಾಮದಲ್ಲಿ ವಿದ್ಯುತ್ ಸರಬರಾಜು ಕಂಪೆನಿಯ ಕಿರುಕುಳ ತಾಳಲಾರದೆ 35ರ ವಯಸ್ಸಿನ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಶರಣಾಗುವ ಮೊದಲು ರೈತ ಮುನೇಂದ್ರ ರಜಪೂತ್ ಡೆತ್ ನೋಟ್ ಬರೆದಿಟ್ಟಿದ್ದು, ಇದರಲ್ಲಿ ನನ್ನ ಮೃತದೇಹವನ್ನು ಸರಕಾರಕ್ಕೆ ಹಸ್ತಾಂತರಿಸಿ ನನ್ನ ದೇಹದ ಎಲ್ಲ ಅಂಗಾಂಗಗಳನ್ನು ಮಾರಾಟ ಮಾಡಿ ಸಾಲವನ್ನು ಮರುಪಾವತಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿನಂತಿಸಿದ್ದಾರೆ.
ಕೊರೋನ ವೇಳೆ ಬಾಕಿ ಉಳಿಸಲಾಗಿದ್ದ 87,000 ರೂ. ವಸೂಲಿಗಾಗಿ ವಿದ್ಯುತ್ ಸರಬರಾಜು ಕಂಪೆನಿ(ಡಿಸ್ಕಾಂ) ರಜಪೂತ್ಗೆ ಸೇರಿರುವ ಹಿಟ್ಟಿನ ಗಿರಣಿ ಹಾಗೂ ಬೈಕ್ ಮುಟ್ಟುಗೋಲು ಹಾಕಿಕೊಂಡಿದ್ದರು ಎಂದು ಮೃತ ರೈತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ದೊಡ್ಡ ರಾಜಕಾರಣಿಗಳು ಹಾಗೂ ಉದ್ಯಮಿಗಳು ಹಗರಣಗಳನ್ನು ನಡೆಸಿದ್ದರೂ ಸರಕಾರಿ ಉದ್ಯೋಗಿಗಳು ಅವರ ಮೇಲೆ ಕ್ರಮ ಕೈಗೊಳ್ಳವುದಿಲ್ಲ.ಅವರು ಸಾಲ ಪಡೆದರೆ ಹಣ ಮರು ಪಾವತಿಗೆ ಸಾಕಷ್ಟು ಸಮಯ ನೀಡಲಾಗುತ್ತದೆ ಅಥವಾ ಸಾಲ ಮನ್ನಾ ಮಾಡಲಾಗುತ್ತದೆ. ಆದರೆ, ಬಡವನೊಬ್ಬ ಸಣ್ಣ ಮೊತ್ತದ ಸಾಲ ಪಡೆದರೆ ಸಾಲ ಮರುಪಾವತಿಸಲು ಏಕೆ ಸಾಧ್ಯವಾಗಿಲ್ಲ ಎಂದು ಕೂಡ ಕೇಳುವುದಿಲ್ಲ. ಅದರ ಬದಲಿಗೆ ಎಲ್ಲರೆದುರು ಅವರಿಗೆ ಅವಮಾನ ಮಾಡಲಾಗುತ್ತದೆ ಎಂದು ರೈತ ತನ್ನ ಡೆತ್ ನೋಟ್ನಲ್ಲಿ ಬರೆದಿದ್ದಾರೆ.
ರಜಪೂತ್ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದಾಗಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಲಿಲ್ಲ. ಬಳಿಕ ಡಿಸ್ಕಮ್ 87,000 ವಸೂಲಿ ಮಾಡಲು ನೋಟಿಸ್ ನೀಡಿದೆ ಎಂದು ರೈತನ ಕುಟುಂಬ ತಿಳಿಸಿದೆ.
ಮೃತ ರೈತ ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 35-year-old farmer allegedly committed suicide by hanging himself at his village in Chhatarpur district in Bundelkhand region of Madhya Pradesh. The deceased, Munendra Rajput, took the extreme step after discom officials seized his atta chakki (flour mill) and bike for not clearing electricity bills.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm