ಬ್ರೇಕಿಂಗ್ ನ್ಯೂಸ್
12-03-26 09:01 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 12: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ 13ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಇರಾನ್ ಯುದ್ಧ ಕೊನೆಗೊಳಿಸಲು ಅಮೆರಿಕಕ್ಕೆ ಷರತ್ತುಗಳನ್ನು ವಿಧಿಸಿದೆ. ಯುದ್ಧ ನಿಲ್ಲಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕು. ಶಾಂತಿ ಸ್ಥಾಪನೆಗಾಗಿ ಮೂರು ಪ್ರಮುಖ ಷರತ್ತುಗಳನ್ನು ಜಾರಿಗೆ ತರಬೇಕೆಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.
ಅಮೆರಿಕವು ಇರಾನ್ ದೇಶದ ಕಾನೂನುಬದ್ಧ ಹಕ್ಕುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು ಮತ್ತು ಇತ್ತೀಚಿನ ಸಂಘರ್ಷದಿಂದ ಉಂಟಾದ ನಷ್ಟಗಳಿಗೆ ಪರಿಹಾರ ನೀಡಬೇಕು. ಹಾಗೂ ಭವಿಷ್ಯದಲ್ಲಿ ಇರಾನ್ ಮೇಲೆ ಯಾವುದೇ ದಾಳಿ ನಡೆಯಬಾರದು ಎಂಬ ಸ್ಪಷ್ಟ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರವಸೆ ನೀಡಬೇಕು. ಈ ಷರತ್ತುಗಳನ್ನು ಒಪ್ಪಿದರೆ ಮಾತ್ರ ಯುದ್ಧ ನಿಲ್ಲುತ್ತದೆ ಎಂದು ಇರಾನ್ ಅಧ್ಯಕ್ಷರು ಹೇಳಿದ್ದು ಅಮೆರಿಕ ಮತ್ತು ಇಸ್ರೇಲ್ ಮೇಲೆ ಒತ್ತಡ ಹೆಚ್ಚಿಸಿದೆ.
ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಪೆಜೆಶ್ಲಿಯಾನ್, ಈ ಷರತ್ತುಗಳನ್ನು ಹಾಕಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ತಮ್ಮ ದೇಶ ಬದ್ಧವಾಗಿದೆ ಎಂದೂ ಪೆಜೆಶ್ಕಿಯಾನ್ ಪುನರುಚ್ಚರಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಸೌದ್ ಪೆಜೆಶ್ಕಿಯನ್, ರಷ್ಯಾ ಮತ್ತು ಪಾಕಿಸ್ತಾನದ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದೆ. ಮಧ್ಯ ಪ್ರಾಚ್ಯದಲ್ಲಿ ಶಾಂತಿಗಾಗಿ ಇರಾನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದೇನೆ ಎಂದಿದ್ದಾರೆ.
ಇಸ್ರೇಲ್ ಖಡಕ್ ಪ್ರತಿಕ್ರಿಯೆ:
ಯುದ್ಧ ನಿಲ್ಲಲು ಇರಾನ್ ಷರತ್ತು ವಿಧಿಸಿದ್ದಕ್ಕೆ ಇಸ್ರೇಲ್ ಖಡಕ್ ಪ್ರತಿಕ್ರಿಯೆ ನೀಡಿದೆ. "ಅಗತ್ಯ ಇರುವ ವರೆಗೆ ಇರಾನ್ನೊಂದಿಗೆ ಯುದ್ಧ ಮುಂದುವರಿಸಲು ನಾವು ಸಿದ್ಧರಿದ್ದೇವೆ" ಎಂದು ಇಸ್ರೇಲ್ನ ಸೇನಾ ವಕ್ತಾರರು ಹೇಳಿದ್ದಾರೆ. ಇತ್ತೀಚೆಗಷ್ಟೇ ದಾಳಿ ನಡೆಸಿದ್ದ ಇಸ್ರೇಲ್ ಪಡೆಗಳು ಸಮುದ್ರದಲ್ಲಿ ಬಾಂಬ್ ಇಡುತ್ತಿದ್ದ ಇರಾನ್ನ 16 ಹಡಗುಗಳನ್ನು ಧ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಅಮೆರಿಕದ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿ ತೀವ್ರ ಹಾನಿ ಉಂಟು ಮಾಡಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವಿಗೀಡಾಗಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm