ಬ್ರೇಕಿಂಗ್ ನ್ಯೂಸ್
13-03-26 11:24 am HK News Staffer ದೇಶ - ವಿದೇಶ
ಶ್ರೀನಗರ, ಮಾರ್ಚ್ 13: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಸರನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಹತ್ಯೆಗೆ ಬುಧವಾರ ರಾತ್ರಿ ವಿಫಲ ಯತ್ನ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಬ್ದುಲ್ಲಾ ಅವರ ಮೇಲೆ ವ್ಯಕ್ತಿಯೊಬ್ಬರು ಗುಂಡು ಹಾರಿಸಿ, ಹತ್ಯೆಗೆ ಯತ್ನಿಸಿದ್ದಾರೆ.
ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದ ರಾಯಲ್ ಪಾರ್ಕ್ ಬ್ಯಾಂಕ್ವೆಟ್ ಹಾಲ್ನಲ್ಲಿ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯ ಕ್ಷಿಪ್ರ ಕ್ರಮದಿಂದಾಗಿ ಫಾರೂಕ್ ಅಬ್ದುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಂಡು ಹಾರಿಸಿದ ವ್ಯಕ್ತಿಯನ್ನು ಕಮಲ್ ಸಿಂಗ್ ಜಮ್ಹಾಲ್ (68) ಎಂದು ಗುರುತಿಸಲಾಗಿದೆ. ಎನ್ಸಿ ನಾಯಕರೊಬ್ಬರ ಮಗಳ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ಅಬ್ದುಲ್ಲಾ ಅವರನ್ನು ಹಿಂಬಾಲಿಸಿಕೊಂಡು ಬಂದ ಜಮ್ಹಾಲ್ ಗುಂಡು ಹಾರಿಸಲು ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಬಂದೂಕುಧಾರಿಯನ್ನು ಹಿಡಿದು, ಹತ್ಯೆ ಯತ್ನ ತಡೆದಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಬಂದೂಕುಧಾರಿ ನಡುವಿನ ಗುದ್ದಾಟದ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ವೇಳೆ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಸೇರಿ ಹಲವು ನಾಯಕರು ಫಾರೂಕ್ ಅಬ್ದುಲ್ಲಾ ಜತೆಗಿದ್ದರು.
ಆರೋಪಿ ಬಂಧಿಸಿದ ಎನ್ಎಸ್ ಜಿ:
ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡು ಹಾರಿಸಲು ಯತ್ನಿಸಿದ ಹಿಂದಿನ ಕಾರಣದ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜೆಡ್ ಸೆಕ್ಯುರಿಟಿ ಭೇದಿಸಿ ಫಾರೂಕ್ ಅಬ್ದುಲ್ಲಾ ಅವರ ಬಳಿ ಹೋಗಲು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ. ತಮ್ಮ ಮೇಲಿನ ಹತ್ಯೆ ಯತ್ನ ಕುರಿತು ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ 'ದೇವರೇ ನನ್ನನ್ನು ಕಾಪಾಡಿದ್ದಾನೆ' ಎಂದು ಹುಬ್ಬೇರಿಸಿದ್ದಾರೆ. ''ಮದುವೆ ಮಂಟಪದಿಂದ ಹೊರಗೆ ಬರುತ್ತಿದ್ದಂತೆ ಆರೋಪಿ ಏಕಾಏಕಿ ಗುಂಡು ಹಾರಿಸಲು ಯತ್ನಿಸಿದ. ಸ್ಥಳದಲ್ಲಿದ್ದ ಎನ್ ಎಸ್ ಜಿ ಸೇರಿದಂತೆ ಭದ್ರತಾ ಸಿಬ್ಬಂದಿ ಬಂದೂಕುಧಾರಿಯನ್ನು ಹಿಡಿದರು. ಬಳಿಕ ನನ್ನನ್ನು ಕಾರಿನಲ್ಲಿ ಕೂರಿಸಿ ಸುರಕ್ಷಿತವಾಗಿ ಕಳುಹಿಸಿದರು ಎಂದು ಫಾರೂಕ್ ಹೇಳಿದ್ದಾರೆ.
20 ವರ್ಷದ ಸೇಡು ; ಆರೋಪಿ ಹೇಳಿಕೆ:
ವಿಚಾರಣೆ ವೇಳೆ ಹತ್ಯೆ ಯತ್ನದ ಕುರಿತು ವಿವರಣೆ ನೀಡಿರುವ ದಾಳಿಕೋರ ಕಮಲ್ ಸಿಂಗ್ ಜಮ್ಹಾಲ್, "ಕಳೆದ 20 ವರ್ಷಗಳಿಂದ ಫಾರೂಕ್ ಅಬ್ದುಲ್ಲಾ ಕೊಲ್ಲಲು ಬಯಸಿದ್ದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಮಯ ಬಳಸಿಕೊಂಡು ಹತ್ಯೆಗೆ ಯತ್ನಿಸಿದೆ. ಆದರೆ, ನನ್ನ ಪ್ರಯತ್ನ ವಿಫಲವಾಯಿತು ಎಂದು ಹೇಳಿದ್ದಾನೆ.
ಫಾರೂಕ್ ಅಬ್ದುಲ್ಲಾ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಹತ್ಯೆಯತ್ನ ನಡೆದಿದೆ. ಅಂಗರಕ್ಷಕರೊಂದಿಗೆ ನಿಯೋಜಿತ ಎನ್ ಎಸ್ ಜಿಯ ಭದ್ರತಾ ಸಿಬ್ಬಂದಿ ಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಗುಂಡು ಹಾರಿಸಲು ಬಳಸಲಾದ ಪಿಸ್ತೂಲನ್ನು ವಶಪಡಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm