ಬ್ರೇಕಿಂಗ್ ನ್ಯೂಸ್
16-03-26 02:44 pm HK News Staffer ದೇಶ - ವಿದೇಶ
ಅಬುಧಾಬಿ, ಮಾರ್ಚ್ 16: ಇರಾನ್ ಯುದ್ಧದ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ ಒಟ್ಟು 35 ಮಂದಿಯನ್ನು ಬಂಧಿಸಲು ಯುಎಇ ಸರ್ಕಾರ ಆದೇಶ ಹೊರಡಿಸಿದ್ದು, ಈ ವಿಚಾರವನ್ನು ಯುಎಇ ಅಧಿಕಾರಿಗಳು ಅಧಿಕೃತವಾಗಿ ತಿಳಿಸಿದ್ದಾರೆ.
ತನಿಖೆ ವೇಳೆ ಆರೋಪಿಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಹಾಗೂ ತಪ್ಪು ನಿರೂಪಣೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವುದು ಪತ್ತೆಯಾಗಿದೆ. ಜನರಲ್ಲಿ ಗೊಂದಲ ಹಾಗೂ ಪ್ರಚೋದನೆ ಉಂಟುಮಾಡುವ ಉದ್ದೇಶದಿಂದ ಈ ರೀತಿಯ ಸುಳ್ಳು ಮಾಹಿತಿಯನ್ನು ಹರಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಯುಎಇ ಅಟಾರ್ನಿ ಜನರಲ್ ಡಾ. ಹಮದ್ ಸೈಫ್ ಅಲ್ ಶಮ್ಸ್, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೇಲ್ವಿಚಾರಣೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಆರೋಪಿಗಳು ತ್ವರಿತ ನ್ಯಾಯಾಲಯದಿಂದ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಬಂಧನಕ್ಕೆ ಒಳಪಟ್ಟವರನ್ನು ಮೂರು ಗುಂಪುಗಳಾಗಿ ಪಟ್ಟಿ ಮಾಡಲಾಗಿದೆ. ಮೊದಲ ಗುಂಪಿನಲ್ಲಿ ಐವರು ಭಾರತೀಯರು, ಒಬ್ಬ ಪಾಕಿಸ್ತಾನಿ, ಒಬ್ಬ ನೇಪಾಳಿ, ಇಬ್ಬರು ಫಿಲಿಪಿನೋಗಳು ಹಾಗೂ ಒಬ್ಬ ಈಜಿಪ್ಟ್ ಮೂಲದ ವ್ಯಕ್ತಿ ಸೇರಿದ್ದಾರೆ. ಎರಡನೇ ಗುಂಪಿನಲ್ಲಿ ಐವರು ಭಾರತೀಯರು ಹಾಗೂ ನೇಪಾಳ ಮತ್ತು ಬಾಂಗ್ಲಾದೇಶದ ತಲಾ ಇಬ್ಬರು ಆರೋಪಿಗಳು ಇದ್ದಾರೆ. ಮೂರನೇ ಗುಂಪಿನಲ್ಲಿ ಐವರು ಭಾರತೀಯರು ಮತ್ತು ಒಬ್ಬ ಪಾಕಿಸ್ತಾನಿ ಇದ್ದಾರೆ. ಇದೇ ರೀತಿಯ ಅಪರಾಧ ಪ್ರಕರಣದಲ್ಲಿ ಮತ್ತಿಬ್ಬರು ಭಾರತೀಯರು ಸಹ ಆರೋಪಗಳನ್ನು ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಶನಿವಾರ 10 ಆರೋಪಿಗಳನ್ನು ವಿಚಾರಣೆ ನಡೆಸಿದ ಬಳಿಕ ಸಾರ್ವಜನಿಕ ವಿಚಾರಣೆ ಪ್ರಾರಂಭಿಸಲಾಗಿದೆ. ಅವರನ್ನು ನ್ಯಾಯಾಲಯದ ಆದೇಶದಂತೆ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಯುಎಇಯ ವಿವಿಧ ಪ್ರದೇಶಗಳಲ್ಲಿ ಸ್ಫೋಟಗಳು ಹಾಗೂ ಪ್ರಮುಖ ಕಟ್ಟಡಗಳ ಮೇಲೆ ದಾಳಿಗಳು ನಡೆದಂತೆ ತೋರಿಸುವ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಿದ ವಿಡಿಯೋಗಳು ಮತ್ತು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುಎಇ ಕಾನೂನು ಪ್ರಕಾರ ಇಂತಹ ಅಪರಾಧಗಳಿಗೆ ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ ಹಾಗೂ ಕನಿಷ್ಠ 1,00,000 ದಿರ್ಹಮ್ (ಸುಮಾರು 25 ಲಕ್ಷ ರೂಪಾಯಿ) ದಂಡ ವಿಧಿಸುವ ವ್ಯವಸ್ಥೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm