ಬ್ರೇಕಿಂಗ್ ನ್ಯೂಸ್
19-03-26 04:35 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 19: ಇರಾನ್- ಅಮೆರಿಕ ಯುದ್ಧದಿಂದಾಗಿ ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ತೈಲ ಹೊತ್ತ ನೂರಾರು ಹಡಗುಗಳು ಅಲ್ಲಿ ಸಿಲುಕಿಕೊಂಡಿವೆ. ಭಾರತದ 22ಕ್ಕೂ ಹೆಚ್ಚು ಹಡಗುಗಳು ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಸಿಲುಕಿರುವುದಾಗಿ ಕೇಂದ್ರ ಸರ್ಕಾರದ ಶಿಪ್ಪಿಂಗ್ ಸಚಿವಾಲಯ ಮಾಹಿತಿ ನೀಡಿದೆ.
ಈಗಾಗಲೇ ‘ಶಿವಾಲಿಕ್’ ಮತ್ತು ‘ನಂದಾದೇವಿ’ ಹಡಗುಗಳು ಸೇರಿ ಸುಮಾರು 92 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿಯನ್ನು ಭಾರತಕ್ಕೆ ತಲುಪಿಸಿವೆ. ‘ಜಗ್ ಲಾಡ್ಕಿ’ ಸೇರಿದಂತೆ ಇನ್ನೂ ಕೆಲವು ಹಡಗುಗಳು ಕಚ್ಚಾ ತೈಲವನ್ನು ಹೊತ್ತು ದೇಶ ತಲುಪುತ್ತಿದೆ. ಇದೇ ವೇಳೆ, ಅಲ್ಲಿ ಸಿಕ್ಕಿಬಿದ್ದ ಎಲ್ಲ ಹಡಗುಗಳನ್ನು ಸುರಕ್ಷಿತವಾಗಿ ಕರೆತರಲು ಭಾರತೀಯ ನೌಕಾಪಡೆ ಒಮಾನ್ ಗಲ್ಫ್ ಭಾಗದತ್ತ ಯುದ್ಧನೌಕೆಗಳನ್ನು ರವಾನಿಸಿದೆ ಎಂಬ ಮಾಹಿತಿಗಳಿವೆ.
ತೈಲ ಹಡಗುಗಳಿಗೆ ಎಸ್ಕಾರ್ಟ್ ನೀಡಲು 6ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ ಎಂದು ಕೆಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ದೃಢೀಕರಣ ನೀಡಿಲ್ಲ. ಇದೇ ವೇಳೆ, ಹೊರ್ಮುಜ್ ಜಲಸಂಧಿ ಸಂಪೂರ್ಣವಾಗಿ ಬಂದ್ ಆಗಿಲ್ಲ ಎಂದು ಹೇಳಲಾಗುತ್ತಿದೆ. ಇರಾನ್ ಪ್ರತಿ ಹಡಗಿನ ದಾಖಲೆಗಳನ್ನು ಪರಿಶೀಲಿಸಿ ಬಳಿಕವೇ ಸಾಗಲು ಅನುಮತಿ ನೀಡುತ್ತಿದೆ. ಅಮೆರಿಕಕ್ಕೆ ಸಂಬಂಧಿಸಿದ ಹಡಗುಗಳನ್ನು ಮಾತ್ರ ತಡೆಯಲಾಗುತ್ತಿದೆ ಎಂಬ ಮಾಹಿತಿಯಿದೆ. ಭಾರತ ಸೇರಿದಂತೆ ಹಲವು ದೇಶಗಳ ಹಡಗುಗಳನ್ನು ಪರಿಶೀಲನೆ ಬಳಿಕ ಬಿಡುಗಡೆ ಮಾಡಲಾಗಿದೆ.
ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ:
ಇತ್ತ ದೇಶದಲ್ಲಿ ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್ಪಿಜಿ ಉತ್ಪಾದನೆಯನ್ನು ಶೇಕಡಾ 40ರಷ್ಟು ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಈಗಾಗಲೇ 15 ರಾಜ್ಯಗಳಲ್ಲಿ ಕಮರ್ಷಿಯಲ್ ಎಲ್ಪಿಜಿ ವಿತರಣೆ ಆರಂಭಗೊಂಡಿದ್ದು, ಸುಮಾರು 7,200 ಟನ್ ಅನಿಲವನ್ನು ಹೆಚ್ಚುವರಿಯಾಗಿ ಪೂರೈಸಲಾಗಿದೆ ಎಂದು ಇಲಾಖೆ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದ್ದಾರೆ.
ಕಮರ್ಷಿಯಲ್ ಎಲ್ಪಿಜಿ ಸಿಗದೆ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ತೀವ್ರ ಬಿಕ್ಕಟ್ಟಿನ ಸ್ಥಿತಿ ಎದುರಾಗಿದ್ದು ರೆಸ್ಟೋರೆಂಟ್, ಹೊಟೇಲುಗಳು ಬಂದ್ ಆಗಿವೆ. ರಾಜ್ಯದಲ್ಲಿ ದಿನಕ್ಕೆ ಒಂದು ಸಾವಿರ ಅಷ್ಟೇ ಕಮರ್ಷಿಯಲ್ ಗ್ಯಾಸ್ ಲಭ್ಯ ಇದೆ, ಅದನ್ನು ಯಾರಿಗಂತ ಕೊಡೋಕಾಗುತ್ತೆ. ರಾಜ್ಯದಲ್ಲಿ 40 ಸಾವಿರ ರೆಸ್ಟೋರೆಂಟ್ ಇದೆ ಎಂದು ಸಚಿವ ಮುನಿಯಪ್ಪ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm