ಬ್ರೇಕಿಂಗ್ ನ್ಯೂಸ್
19-03-26 04:51 pm HK News Staffer ದೇಶ - ವಿದೇಶ
ಲಂಡನ್, ಮಾ 19: ರಸ್ತೆಯಲ್ಲಿ ಪಾನ್ ಉಗುಳಿದ ಪ್ರಕರಣದಲ್ಲಿ ಭಾರತ ಮೂಲದ ಇಬ್ಬರು ವ್ಯಕ್ತಿಗಳಿಗೆ ಭಾರೀ ದಂಡ ವಿಧಿಸಿರುವ ಘಟನೆ ಗಮನ ಸೆಳೆಯುತ್ತಿದೆ. ಸ್ವಚ್ಛತೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಬ್ರಿಟನ್ ಆಡಳಿತ, ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ಕೈಗೊಂಡಿದೆ.
ಎಡ್ಗ್ವೇರ್ ನಿವಾಸಿ ಅಕ್ಷಿತ್ಕುಮಾರ್ ಮತ್ತು ಹಿತೇಶ್ ಪಟೇಲ್ ಜೂನ್ 11, 2025ರಂದು ಕಿಂಗ್ಸ್ಬರಿ ರಸ್ತೆಯಲ್ಲಿ ಪಾನ್ ಉಗುಳಿದ ಪ್ರಕರಣದಲ್ಲಿ ಮೊದಲಿಗೆ 100 ಯುರೋ ದಂಡ ವಿಧಿಸಲಾಗಿತ್ತು. ಆದರೆ ದಂಡ ಪಾವತಿಸದೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನಂತರ ದಂಡವನ್ನು 1,391 ಯುರೋಗೆ ಏರಿಸಿ ವಿಧಿಸಲಾಗಿದೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ ರುಯಿಸ್ಲಿಪ್ ನಿವಾಸಿ ಹಿತೇಶ್ ಪಟೇಲ್ ಕೂಡ ಜೂನ್ 12ರಂದು ವೆಂಬ್ಲಿ ಹಿಲ್ ರಸ್ತೆಯಲ್ಲಿ ಪಾನ್ ಉಗುಳಿದ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ವಿಚಾರಣೆಗೆ ಹಾಜರಾಗದ ಕಾರಣ, ನ್ಯಾಯಾಲಯವು ಅವರಿಗೂ 1,391 ಯುರೋ ದಂಡ ವಿಧಿಸಿದೆ.
ಪಾನ್ ಉಗುಳುವುದರಿಂದ ರಸ್ತೆಗಳಲ್ಲಿ ಉಂಟಾಗುವ ಕಲೆಗಳನ್ನು ತೆರವುಗೊಳಿಸಲು ವರ್ಷಕ್ಕೆ ಸಾವಿರಾರು ಯುರೋ ವೆಚ್ಚವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಂತ್ರಗಳ ಮೂಲಕವೂ ಈ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವುದು ಕಷ್ಟಕರವಾಗಿದೆ.
ಈ ಹಿನ್ನೆಲೆಯಲ್ಲಿ ಲಂಡನ್ ಕೌನ್ಸಿಲ್ ಕಟ್ಟುನಿಟ್ಟಿನ ಮೇಲ್ವಿಚಾರಣೆ ಜಾರಿಗೊಳಿಸಿದ್ದು, ಅಧಿಕಾರಿಗಳು ಪ್ರತಿದಿನ ಗಸ್ತು ತಿರುಗುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಉಗುಳುವುದನ್ನು ಕಂಡುಬಂದರೆ ತಕ್ಷಣವೇ ದಂಡ ವಿಧಿಸಲಾಗುತ್ತಿದೆ. ಒಟ್ಟಾರೆ, ಸ್ವಚ್ಛತೆಗೆ ಆದ್ಯತೆ ನೀಡುತ್ತಿರುವ ಲಂಡನ್ ಆಡಳಿತ, ನಿಯಮ ಉಲ್ಲಂಘನೆಗೆ ಶೂನ್ಯ ಸಹಿಷ್ಣುತೆ ತೋರಿಸುತ್ತಿರುವುದು ಸ್ಪಷ್ಟವಾಗಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm