ಬ್ರೇಕಿಂಗ್ ನ್ಯೂಸ್
27-03-26 04:07 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 27: ಯುದ್ಧದಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕ ಹೆಜ್ಜೆ ಇಟ್ಟಿದ್ದಾರೆ. ಇರಾನ್ ತನ್ನ ಷರತ್ತುಗಳಿಗೆ ಬಗ್ಗದಿದ್ದರೆ ದೊಡ್ಡ ಮಟ್ಟದ ದಾಳಿ ನಡೆಸುತ್ತೇವೆ ಎಂದಿದ್ದ ಟ್ರಂಪ್, ಇದೀಗ ದಾಳಿ ಗಡುವನ್ನು ಹತ್ತು ದಿನಕ್ಕೆ ಮುಂದೂಡಿದ್ದಾರೆ.
ಇಂಧನ ಮೂಲಗಳನ್ನು ಗುರಿಯಾಗಿಸಿ ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ದಿಢೀರ್ ಎನ್ನುವಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಯುದ್ಧದ ಆತಂಕವನ್ನು ಕೆಲವು ದಿನಗಳ ಕಾಲ ದೂರ ಮಾಡಿದ್ದಾರೆ. ಆದರೆ, ಈ ನಿರ್ಧಾರವನ್ನು ಇರಾನ್ ವಿನಂತಿಯ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇರಾನ್ ಜೊತೆಗೆ ಮಾತುಕತೆಗೆ ಇನ್ನಷ್ಟು ಸಮಯ ನೀಡುವುದರಿಂದ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಅವಧಿಯಲ್ಲಿ ಇರಾನ್ ತನ್ನ ನಿಲುವಿನಲ್ಲಿ ಬದಲಾವಣೆ ತರಬಹುದು ಮತ್ತು ಅಮೆರಿಕ ನೀಡಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇರಾನ್ ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ನೀಡಿದ ಪ್ರಸ್ತಾವನೆಗಳು ಏಕಪಕ್ಷೀಯ ಮತ್ತು ತಮ್ಮ ಹಿತಾಸಕ್ತಿಗಳಿಗೆ ಅನುಕೂಲಕರವಾಗಿಲ್ಲ ಎಂದು ಇದಕ್ಕೂ ಮುನ್ನ ಟೀಕಿಸಿತ್ತು.
ನೇರ ಮಾತುಕತೆ ಬದಲು ಪರೋಕ್ಷ ಮಾತುಕತೆ ನಡೆಯುತ್ತಿರುವುದರಿಂದ ಶಾಂತಿ ಒಪ್ಪಂದದ ಬಗ್ಗೆ ಅನುಮಾನಗಳು ಮೂಡತೊಡಗಿವೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ 'ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ' ಎಂಬ ಹೇಳಿಕೆ ಮತ್ತು ಇರಾನ್ ಪ್ರತಿಕ್ರಿಯೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೇ ವೇಳೆ, ಯುದ್ಧದ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಪರಿಣಾಮ ಬೀರಿವೆ. ಇಂಧನ ಕ್ಷೇತ್ರದಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಯುದ್ದದಿಂದಾಗಿ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಭದ್ರತೆ ಮೇಲೂ ಪರಿಣಾಮ ಬೀರಿದೆ.
ಟ್ರಂಪ್ ಅವರ ಈ ತೀರ್ಮಾನವನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಕೆಲವರು ಇದನ್ನು ಶಾಂತಿ ಮಾತುಕತೆಗಳಿಗೆ ಅವಕಾಶ ನೀಡುವ ಧೈರ್ಯಶಾಲಿ ರಾಜತಾಂತ್ರಿಕ ಹೆಜ್ಜೆ ಎಂದು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಕೇವಲ ಸೈನಿಕ ಒತ್ತಡವನ್ನು ಮುಂದುವರಿಸಿ ಸಮಯ ಗೆಲ್ಲುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm