ಬ್ರೇಕಿಂಗ್ ನ್ಯೂಸ್
01-04-26 11:03 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಏಪ್ರಿಲ್ 1: ಇರಾನ್ ಜೊತೆಗಿನ ಯುದ್ಧವನ್ನು ನಿಲ್ಲಿಸಲು ಅಮೆರಿಕದಲ್ಲಿಯೇ ಒತ್ತಡ ಕೇಳಿಬರುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಜನ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಹಲವು ದೇಶಗಳು ಕೂಡ ಯುದ್ಧ ನಿಲ್ಲಿಸಲು ಒತ್ತಡ ಹೇರುತ್ತಿವೆ. ಇದೇ ವೇಳೆ, ಯುದ್ಧದಿಂದಾಗಿ ಅಮೆರಿಕಕ್ಕೆ ಭಾರೀ ನಷ್ಟವೂ ಉಂಟಾಗಿದ್ದು ಇದು ಅಮೆರಿಕದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದರ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಅಧ್ಯಕ್ಷರೇ ಅಮೆರಿಕದ ಬಳಿ ಕದನ ವಿರಾಮಕ್ಕೆ ಮನವಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದರೆ ಟ್ರಂಪ್ ಮಾತನ್ನು ಇರಾನ್ ಸ್ಪಷ್ಟವಾಗಿ ತಳ್ಳಿಹಾಕಿದೆ. ‘ಟ್ರೂತ್ ಸೋಷಿಯಲ್’ನಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, ಇರಾನ್ ಹೊಸ ಆಡಳಿತ ಹಿಂದಿನವರಿಗಿಂತ ಹೆಚ್ಚು ಬುದ್ಧಿವಂತವಾಗಿದ್ದು, ಅಮೆರಿಕದ ಬಳಿ ಯುದ್ಧ ವಿರಾಮವನ್ನು ಕೇಳುತ್ತಿದೆ ಎಂದು ಹೇಳಿದ್ದಾರೆ. ಆದರೆ ಹೋರ್ಮುಜ್ ಜಲಸಂಧಿಯನ್ನು ಎಲ್ಲ ದೇಶಗಳಿಗೆ, ಸ್ವತಂತ್ರವಾಗಿ ಪುನರ್ ಆರಂಭಿಸಿದ ಬಳಿಕ ಮಾತ್ರ ಅಮೆರಿಕ ಕದನ ವಿರಾಮವನ್ನು ಪರಿಗಣಿಸುತ್ತದೆ ಎಂಬ ಶರತ್ತನ್ನೂ ಮುಂದಿಟ್ಟಿದ್ದಾರೆ.
“ಹೋರ್ಮುಜ್ ಜಲಸಂಧಿ ಮುಕ್ತಗೊಳ್ಳುವ ವರೆಗೆ ನಾವು ಕಾಯುತ್ತೇವೆ. ಇಲ್ಲವಾದರೆ ಇರಾನ್ ಅನ್ನು ಸಂಪೂರ್ಣವಾಗಿ ನಾಶ ಮಾಡುವುದಕ್ಕಾಗಲಿ, ಅಥವಾ ಶಿಲಾಯುಗಕ್ಕೆ ಹಿಂದಕ್ಕೆ ತಳ್ಳುವವರೆಗೆ ನಾವು ಮುಂದುವರೆಯುತ್ತೇವೆ ಎಂದು ಟ್ರಂಪ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದರ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿದ ಹೇಳಿಕೆಯಲ್ಲಿ, ಇರಾನ್ ಯಾವುದೇ ರೀತಿಯ ಕದನ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾವು ನಮ್ಮ ರಕ್ಷಣೆಗೆ ಯಾವುದೇ ಗಡುವು ಇಡುವುದಿಲ್ಲ. ಬೆದರಿಕೆ ಭಾಷೆಯಲ್ಲಿ ಯಾರೂ ಇರಾನ್ ಜನರೊಂದಿಗೆ ಮಾತನಾಡಲು ಸಾಧ್ಯವಿಲ್ಲ,” ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಅಮೆರಿಕದೊಂದಿಗೆ ಮಾತುಕತೆಗಳಿಂದ ಫಲಿತಾಂಶ ಸಿಗುತ್ತದೆ ಎಂಬ ವಿಶ್ವಾಸವೇ ಇಲ್ಲ. ವಿಶ್ವಾಸದ ಮಟ್ಟ ಶೂನ್ಯವಾಗಿದೆ ಎಂದವರು ಹೇಳಿದ್ದಾರೆ.
ಭೂಯುದ್ಧದ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, “ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. ಯಾವುದೇ ಭೂ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಬಲ್ಲೆವು ಎಂದಿದ್ದಾರೆ. ಅಲ್ಲದೆ, ನಮ್ಮ ಷರತ್ತುಗಳು ಸ್ಪಷ್ಟವಾಗಿವೆ. ನಾವು ಯುದ್ಧ ವಿರಾಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm