ಬ್ರೇಕಿಂಗ್ ನ್ಯೂಸ್
04-01-21 01:01 pm Headline Karnataka News Network ದೇಶ - ವಿದೇಶ
ಲಕ್ನೋ, ಜ. 3 : ಗಾಜಿಯಾಬಾದಿನ ಮುರಾದ್ ನಗರದಲ್ಲಿ ಭಾರೀ ದುರಂತ ಸಂಭವಿಸಿದ್ದು ಸ್ಮಶಾನದ ಮೇಲ್ಛಾವಣಿ ಕುಸಿದು 25 ಮಂದಿ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಯಾನಂದ್ ಕಾಲೋನಿಯ ನಿವಾಸಿಯಾಗಿದ್ದ ರಾಮ್ ಧನ್ ಅಲಿಯಾಸ್ ದಯಾರಾಮ್ ಎಂಬವರ ಅಂತ್ಯಕ್ರಿಯೆಗೆ ನೂರಾರು ಮಂದಿ ಆಗಮಿಸಿದ್ದು ಸ್ಮಶಾನದ ತಂಗುದಾಣದಲ್ಲಿ ಅನೇಕ ಮಂದಿ ನಿಂತಿದ್ದರು. ಈ ತಂಗುದಾಣದ ಮೇಲ್ಛಾವಣಿ ದಿಢೀರ್ ಆಗಿ ಕುಸಿದು ಬಿದ್ದುದರಿಂದ ಅನೇಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಗಾಜಿಯಾಬಾದ್ (ಗ್ರಾಮೀಣ) ಎಸ್ಪಿ ಐರಾಜ್ ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ದುರಂತದಲ್ಲಿ ಮಡಿದವರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ.
ಘಟನೆಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ, 38 ಮಂದಿಯನ್ನು ರಕ್ಷಿಸಲಾಗಿದೆ. 45 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಹಾಗೂ ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದು ಮೀರತ್ ಜಿಲ್ಲಾಧಿಕಾರಿ ಅನೀತಾ ಸಿ ಮೇಶ್ರಮ್ ಸುದ್ದಿಗಾರರಿಗೆ ತಿಳಿಸಿದರು.
At least 25 people have died and 45 persons were injured after a roof collapsed at a crematorium in Uttar Pradesh's Muradnagar.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm