ಬ್ರೇಕಿಂಗ್ ನ್ಯೂಸ್
07-04-26 08:01 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಎಪ್ರಿಲ್ 7: ಗಲ್ಫ್ ಯುದ್ಧದಿಂದಾಗಿ ಹಲವು ರಾಷ್ಟ್ರಗಳು ಪತರಗುಟ್ಟಿ ಹೋಗಿದ್ದು ಇಂಧನ ಪೂರೈಕೆ ಅವ್ಯವಸ್ಥೆಯಿಂದಾಗಿ ಪರ್ಯಾಯ ಚಿಂತನೆಯಲ್ಲಿ ತೊಡಗಿವೆ. ಇದೇ ವೇಳೆ, ಇಂಧನದ ಕಾರಣಕ್ಕೆ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಆಂಶಿಕ ಲಾಕ್ಡೌನ್ ಮಾಡಲು ಮುಂದಾಗಿದೆ. ಇದರಂತೆ, ರಾತ್ರಿ 8 ಗಂಟೆಗೆ ಎಲ್ಲಾ ಮಾರುಕಟ್ಟೆಗಳು ಮತ್ತು ಮಾಲ್‌ಗಳನ್ನು ಮುಚ್ಚುವಂತೆ ಪಾಕಿಸ್ತಾನ ಸರ್ಕಾರ ಆದೇಶ ಹೊರಡಿಸಿದೆ.
ಯುದ್ಧದಿಂದ ಹೆಚ್ಚುತ್ತಿರುವ ಜಾಗತಿಕ ಇಂಧನ ವೆಚ್ಚಗಳನ್ನ ನಿರ್ವಹಿಸಲು ಸಾಧ್ಯವಾಗದೇ ಪಾಕಿಸ್ತಾನ ಈ ಕಠಿಣ ನಿರ್ಧಾರಕ್ಕೆ ಮುಂದಾಗಿದೆ. ರಾತ್ರಿ 8 ಗಂಟೆ ವರೆಗೂ ಮಾತ್ರ ಅಂಗಡಿ, ವ್ಯಾಪಾರಿ ಸಂಕೀರ್ಣಗಳನ್ನು ತೆರೆದಿಡುವಂತೆ ಆದೇಶ ಹೊರಡಿಸಿದೆ. ಭಾಗಶಃ ಲಾಕ್‌ಡೌನ್ ಅಡಿಯಲ್ಲಿ, ಮಾರುಕಟ್ಟೆಗಳು ಮತ್ತು ಮಾಲ್‌ಗಳು 8 ಗಂಟೆಗೆ, ರೆಸ್ಟೋರೆಂಟ್‌ಗಳು 10 ಗಂಟೆಗೆ ಮತ್ತು ಖಾಸಗಿ ಮದುವೆ ಕಾರ್ಯಕ್ರಮಗಳನ್ನು ರಾತ್ರಿ 10 ಗಂಟೆಗೆ ಬಂದ್ ಮಾಡಲು ಸೂಚಿಸಿದೆ. ಈಗಾಗಲೇ ಶಾಲೆಗಳನ್ನು ಒಂದು ತಿಂಗಳ ಕಾಲ ಬಂದ್ ಮಾಡಲಾಗಿದೆ.
ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರದ ಆದೇಶಗಳ ಪ್ರಕಾರ, ಖೈಬರ್ ಪಖ್ತುಂಖ್ವಾ, ಬಲೂಚಿಸ್ತಾನ್, ಇಸ್ಲಮಾಬಾದ್, ಪಾಕಿಸ್ತಾನ ಆಕ್ರಮಿತ ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಮಾರುಕಟ್ಟೆಗಳು, ಶಾಪಿಂಗ್ ಮಾಲ್ ಗಳು, ಸರ್ಕಾರಿ ಮಳಿಗೆಗಳು ಮತ್ತು ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚಲು ಸೂಚಿಸಲಾಗಿದೆ. 8 ಗಂಟೆ ಬಳಿಕ ಯಾವುದೇ ಅಂಗಡಿ ತೆರೆಯುವಂತಿಲ್ಲ.
ನಿರ್ಬಂಧಗಳಿಂದ ವೈದ್ಯಕೀಯ ಸೌಲಭ್ಯ ಹಾಗೂ ಔಷಧಾಲಯಗಳಿಗೆ ವಿನಾಯಿತಿ ನೀಡಲಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳಿಂದಾಗಿ ಪೂರೈಕೆ ಸರಪಳಿಗಳು ಬುಡಮೇಲಾಗಿದ್ದು ಜಾಗತಿಕವಾಗಿ ತೈಲ ಮತ್ತು ಇಂಧನ ಬೆಲೆಗಳು ಏರುತ್ತಿದೆ. ಪಾಕಿಸ್ತಾನದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು, ಇಂಧನ ಆಮದಿನ ಮೌಲ್ಯ ಒಟ್ಟು ಆಮದು ವಹಿವಾಟಿಗಿಂತ 22 ಶೇ. ಹೆಚ್ಚಿದೆ. ಹೀಗಾಗಿ ಭಾಗಶಃ ಲಾಕ್‌ಡೌನ್ ಕ್ರಮಗಳನ್ನು ಜಾರಿಗೊಳಿಸಿ ಪರೋಕ್ಷವಾಗಿ ಇಂಧನ ಬಳಕೆಯ ಮೇಲೆ ನಿಯಂತ್ರಣ ವಿಧಿಸಲು ಮುಂದಾಗಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm