ಬ್ರೇಕಿಂಗ್ ನ್ಯೂಸ್
08-04-26 10:36 am HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 08: ಭಾರೀ ಆತಂಕ, ಕುತೂಹಲ ನಡುವಲ್ಲೇ ಮಹತ್ವದ ಬೆಳವಣಿಗೆಯಾಗಿದ್ದು ಅಮೆರಿಕ ಮತ್ತು ಇರಾನ್ ಮಧ್ಯೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಈ ನಿರ್ಧಾರವನ್ನು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರೂತ್ ಸೋಷಿಯಲ್’ ವೇದಿಕೆಯಲ್ಲಿ ಪ್ರಕಟಿಸಿದ್ದಾರೆ.
ಇರಾನ್ಗೆ ನೀಡಿದ್ದ 48 ಗಂಟೆಗಳ ಗಡುವು ಮುಗಿಯುವ ಒಂದು ಗಂಟೆ ಮೊದಲು ಈ ಘೋಷಣೆ ಹೊರಬಿದ್ದಿದ್ದು, ಮಹತ್ತರ ತಿರುವು ನೀಡಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್ ಒಪ್ಪಿಕೊಂಡಿದ್ದು, ಪ್ರಸ್ತಾಪಿಸಿದ 10 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕ ಸ್ವೀಕರಿಸಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಕದನ ವಿರಾಮಕ್ಕೆ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಹಾಗೂ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮಾಡಿದ ಮಧ್ಯಸ್ಥಿಕೆ ಮಹತ್ವದ್ದಾಗಿದೆ ಎನ್ನಲಾಗಿದೆ. ಟ್ರಂಪ್ ಹೇಳಿಕೆಯಲ್ಲಿ, “ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣ ತೆರೆಯಲು ಒಪ್ಪಿಕೊಂಡರೆ, ನಾವು ಯೋಜಿಸಿದ್ದ ದಾಳಿಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುತ್ತೇವೆ. ಇದು ದ್ವಿಪಕ್ಷೀಯ ಕದನ ವಿರಾಮವಾಗಲಿದೆ,” ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ, ಈ ಒಪ್ಪಂದದ ಭಾಗವಾಗಿ ಇಸ್ರೇಲ್ ಕೂಡ ತಾತ್ಕಾಲಿಕವಾಗಿ ದಾಳಿ ನಿಲ್ಲಿಸಲು ಒಪ್ಪಿಕೊಂಡಿದೆ ಎಂದು ಅಲ್ಲಿನ ಮಾಧ್ಯಮ ವರದಿಗಳು ಹೇಳಿವೆ. ಕದನ ವಿರಾಮ ಘೋಷಣೆ ಬೆನ್ನಲ್ಲೇ ಟೆಹ್ರಾನ್ ಸೇರಿದಂತೆ ಹಲವು ನಗರಗಳಲ್ಲಿ ಜನರು ಬೀದಿಗಿಳಿದು ವಿಜಯೋತ್ಸವ ಆಚರಿಸಿದರು. ರಾಷ್ಟ್ರಧ್ವಜಗಳನ್ನು ಹಿಡಿದು ಘೋಷಣೆ ಕೂಗಿದ ಜನರು, ಇದನ್ನು ತಮ್ಮ ಜಯವೆಂದು ಸಂಭ್ರಮಿಸಿದರು. ಇರಾಕ್ನ ಬಾಗ್ದಾದ್ನಲ್ಲಿಯೂ ಜನರು ಸಂಭ್ರಮಾಚರಣೆ ನಡೆಸಿ ಖುಷಿ ಹಂಚಿಕೊಂಡರು.

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದು, “ಇದು ಯುದ್ಧದ ಅಂತ್ಯವಲ್ಲ, ಕೇವಲ ಕದನ ವಿರಾಮ ಮಾತ್ರ” ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯೆ, ಕಳೆದ ಕೆಲವು ವಾರಗಳಿಂದ ನಡೆದ ಸಂಘರ್ಷದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ಸೃಷ್ಟಿಯಾಗಿತ್ತು. ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ ಪರಿಸ್ಥಿತಿ ಬಿಗಡಾಯಿಸಿತ್ತು.
ಈಗ, ಎರಡು ವಾರಗಳ ಕದನ ವಿರಾಮ ಅವಧಿಯಲ್ಲಿ ಶಾಶ್ವತ ಶಾಂತಿ ಒಪ್ಪಂದದತ್ತ ಮಾತುಕತೆಗಳು ನಡೆಯಲಿದ್ದು, ಮೊದಲ ಹಂತದ ಚರ್ಚೆಗಳು ಇಸ್ಲಾಮಾಬಾದ್ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾರ್ಮುಜ್ ಜಲಸಂಧಿ ಜಾಗತಿಕ ತೈಲ ಸರಬರಾಜಿಗೆ ಪ್ರಮುಖ ಮಾರ್ಗವಾಗಿದ್ದು, ಅದರ ಮುಚ್ಚುವಿಕೆ ಜಾಗತಿಕ ಇಂಧನ ಮಾರುಕಟ್ಟೆಗೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಕದನ ವಿರಾಮಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ನೀಡಲಾಗುತ್ತಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm