ಬ್ರೇಕಿಂಗ್ ನ್ಯೂಸ್
13-04-26 01:27 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 13: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ಯಶಸ್ವಿಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಸಂಧಾನ ವಿಫಲವಾದ ಕೆಲವೇ ಗಂಟೆಗಳಲ್ಲಿ, ಇರಾನ್, ಇಸ್ರೇಲ್ ಪ್ರಧಾನಿ ಮೇಲೆ ಆರೋಪ ಹೊರಿಸಿದೆ.
ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ, ಮಾತುಕತೆ ಹಳಿ ತಪ್ಪಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ನಡೆಯುತ್ತಿದ್ದ ವೇಳೆ ನೆತನ್ಯಾಹು, ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಅದರ ಬಳಿಕ ಮಾತುಕತೆ ದಿಕ್ಕು ತಪ್ಪಿತು ಎಂದು ಅವರು ಹೇಳಿದ್ದಾರೆ.
ಯುದ್ಧದ ಮೂಲಕ ಸಾಧಿಸಲು ಸಾಧ್ಯವಾಗದ್ದನ್ನ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಅಮೆರಿಕ ಪ್ರಯತ್ನಿಸಿತ್ತು. ಆದ್ರೆ ಸಭೆ ನಡೆಯುತ್ತಿದ್ದಾಗ ನೆತನ್ಯಾಹು, ವ್ಯಾನ್ಸ್ಗೆ ಕರೆ ಮಾಡಿ, ಅಮೆರಿಕ- ಇರಾನ್ ಮಾತುಕತೆಗಳಿಂದ ಗಮನವನ್ನ ಇಸ್ರೇಲ್ ಹಿತಾಸಕ್ತಿಗಳತ್ತ ಸೆಳೆದರು. ಇದು ಒಪ್ಪಂದವನ್ನು ಹಾಳುಮಾಡಿತು ಎಂದು ಅರಾಘ್ಚಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದೇ ವೇಳೆ, ವ್ಯಾನ್ಸ್ ಇಸ್ಲಾಮಾಬಾದ್ ತೊರೆಯುವ ಮುನ್ನ ನಡೆಸಿದ ಸುದ್ದಿಗೋಷ್ಠಿಯೂ ಅನಗತ್ಯವಾಗಿತ್ತು ಎಂದು ಇರಾನ್ ಟೀಕಿಸಿದೆ. ತನ್ನ ರಾಷ್ಟ್ರೀಯ ಹಿತಾಸಕ್ತಿ ಹಾಗೂ ಸಾರ್ವಭೌಮತ್ವವನ್ನು ಕಾಪಾಡಲು ಇರಾನ್ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನೆತನ್ಯಾಹು ಕರೆ ಮಾಡಿದ ಆರೋಪದ ಕುರಿತು ಅಮೆರಿಕ ಸ್ಪಷ್ಟನೆ ನೀಡದಿದ್ದರೂ, ಅದನ್ನು ಸಂಪೂರ್ಣವಾಗಿ ತಳ್ಳಿ ಹಾಕಿಲ್ಲ. ಈ ವಿಷಯದಲ್ಲಿ ಪ್ರತಿಕ್ರಿಯೆಯನ್ನು ಕಾಯ್ದಿರಿಸಿರುವುದು ಗಮನಾರ್ಹವಾಗಿದೆ.
ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದು, ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಯುಎಸ್ ನೌಕಾಪಡೆಗೆ ಸೂಚನೆ ನೀಡಿದ್ದಾರೆ. ಇರಾನ್ಗೆ ಸಂಬಂಧಿಸಿದ ಅಕ್ರಮ ಸಾಗಾಟವನ್ನು ತಡೆಯಲು ಹಡಗುಗಳ ಸಂಚಾರದ ಮೇಲೂ ನಿಯಂತ್ರಣ ವಿಧಿಸುವ ಸಾಧ್ಯತೆ ಇದೆ. ಈ ಬೆಳವಣಿಗೆಗಳಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುವ ಆತಂಕ ಎದುರಾಗಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುವ ಸೂಚನೆಗಳು ಕಾಣಿಸುತ್ತಿವೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm