ಬ್ರೇಕಿಂಗ್ ನ್ಯೂಸ್
18-04-26 11:39 pm HK News Desk ದೇಶ - ವಿದೇಶ
ನವದೆಹಲಿ, ಎಪ್ರಿಲ್ 18: ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ್ದನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿ ದಾಳಿಗೆ ಸ್ಕೆಚ್ ಹಾಕಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕಗಳು, ಮೊಬೈಲ್, ಮತ್ತಿತರ ವಸ್ತುಗಳನ್ನು ವಶಪಡಿಸಲಾಗಿದೆ.
ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಿ ಐಇಡಿ ಅಳವಡಿಸಿದ್ದ ರಿಮೋಟ್ ನಿಯಂತ್ರಿತ ಟಾಯ್ ಕಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ಇಬ್ಬರು ಆರೋಪಿಗಳು ತೊಡಗಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ವಿಶೇಷ ದಳವು ಗುಪ್ತಚರ ನೇತೃತ್ವದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಇಬ್ಬರು ಮತ್ತು ಒಡಿಶಾ ಮತ್ತು ಬಿಹಾರದಿಂದ ತಲಾ ಒಬ್ಬ ಆರೋಪಿಗಳನ್ನು ಬಂಧಿಸಿದೆ.
ನಾಲ್ವರು ಆರೋಪಿಗಳು ಇಸ್ಲಾಮಿಕ್ ರಾಷ್ಟ್ರ ಸ್ಥಾಪನೆಯ ಆಲೋಚನೆಯೊಂದಿಗೆ ಉಗ್ರಗಾಮಿ ಸಿದ್ಧಾಂತದಿಂದ ಪ್ರಭಾವಿತರಾಗಿದ್ದರು ಮತ್ತು "ಘಜ್ವಾ-ಎ-ಹಿಂದ್" ತತ್ವಗಳನ್ನು ಪ್ರಚಾರ ಮಾಡುತ್ತಿದ್ದರು. ಇಸ್ಲಾಮಿಕ್ ಖೊರಾಸಾನ್ ಲಷ್ಕರ್' ಪರಿಕಲ್ಪನೆಯಿಂದ ಪ್ರೇರಿತರಾಗಿದ್ದ ಆರೋಪಿಗಳು ತಮ್ಮ ಸಂಪರ್ಕದಲ್ಲಿರುವ ಯಯ
ಯುವಕರನ್ನು ಮತಾಂಧರನ್ನಾಗಿ ಮಾಡಲು ಕಪ್ಪು ಧ್ವಜ ಹಿಡಿದು ಪ್ರಚಾರದಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಮುಚ್ಚಿದ ಮತ್ತು ಎನ್ಕ್ರಿಪ್ಟ್ ಮಾಡಿದ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲಿ ಜಿಹಾದ್, ಉಗ್ರಗಾಮಿ ಸಿದ್ಧಾಂತ ಮತ್ತು ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಳ್ಳಲಾಗುತ್ತಿತ್ತು. ಹೊಸ ಸದಸ್ಯರನ್ನು ಗುರುತಿಸಲು, ಮೂಲಭೂತವಾದ ಬೋಧನೆ ಮಾಡಲು ಮತ್ತು ಅವರನ್ನು ಉಗ್ರಗಾಮಿ ಸಂಘಟನೆಗೆ ನೇಮಕ ಮಾಡಲು ಈ ವೇದಿಕೆಗಳನ್ನು ಬಳಸುತ್ತಿದ್ದರು. ಆರೋಪಿಗಳಲ್ಲಿ ಒಬ್ಬ ತನ್ನ ಅನುಯಾಯಿಗಳನ್ನು ಮತಾಂಧರನ್ನಾಗಿ ಮಾಡಲು ಮತ್ತು ತಮ್ಮ ಗುರಿಯ ಸಂಕೇತವಾಗಿ ಕಪ್ಪು ಧ್ವಜದೊಂದಿಗೆ ಕೆಂಪು ಕೋಟೆಯ ಚಿತ್ರವನ್ನು ಹಂಚಿಕೊಂಡಿದ್ದಾನೆ ಆರೋಪಿಸಲಾಗಿದೆ.
ಮತ್ತೊಬ್ಬ ಆರೋಪಿ ಡಿಸೆಂಬರ್ 2025 ರಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳನ್ನು ಪರಿಶೀಲಿಸಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಅಯೋಧ್ಯೆಯ ರಾಮ ಮಂದಿರ, ಸಂಸತ್ತು ಮತ್ತು ಕೆಲವು ಮಿಲಿಟರಿ ನೆಲೆಗಳ ಮೇಲೆ ಸಂಭಾವ್ಯ ದಾಳಿಗಳ ಬಗ್ಗೆ ಸಂಚು ನಡೆಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm