ಬ್ರೇಕಿಂಗ್ ನ್ಯೂಸ್
04-01-21 05:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.4:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾನನ್ನು ಮತ್ತೆ ಐಟಿ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ರಾಬರ್ಟ್ ವಾದ್ರಾನ ಮನೆಗೆ ಆಗಮಿಸಿರುವ ಐಟಿ ಅಧಿಕಾರಿಗಳು, ಬೇನಾಮಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೇಳಿಕೆಯನ್ನು ದಾಖಲು ಮಾಡುತ್ತಿದ್ದಾರೆ. ಇದೇ ವೇಳೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾದ್ರಾ ಬೆನ್ನು ಬಿದ್ದಿದ್ದು, ವಿಚಾರಣೆ ಆರಂಭಿಸಿದ್ದಾರೆ.
ರಾಬರ್ಟ್ ವಾದ್ರಾ ಲಂಡನ್ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ಭಾರೀ ಬೆಲೆಬಾಳುವ ಆಸ್ತಿಯನ್ನು ಖರೀದಿಸಿದ್ದಾರೆ ಎನ್ನಲಾಗಿದ್ದು, ಹಣದ ಮೂಲದ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೇ ಈ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆಬಳಿಕ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ತಿರುಗಾಡುತ್ತಿದ್ದರು. ಕಳೆದ ವರ್ಷ ಕೊರೊನಾ ಕಾರಣದಿಂದ ವಿಚಾರಣೆಗೆ ಬ್ರೇಕ್ ಬಿದ್ದಿತ್ತು. ಈಗ ಮತ್ತೆ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದು, ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆಯುತ್ತಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ಆಗಿರುವ ಕಾರಣ, ಬಿಜೆಪಿ ರಾಜಕೀಯ ಉದ್ದೇಶದಿಂದ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿದೆ ಎಂದು ರಾಬರ್ಟ್ ವಾದ್ರಾ ಪ್ರಕರಣದಲ್ಲಿ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. 2015ರಲ್ಲಿ ಐಟಿ ಅಧಿಕಾರಿಗಳು ರಾಬರ್ಟ್ ವಾದ್ರಾ ಲಂಡನ್ನಲ್ಲಿ 12 ಮಿಲಿಯನ್ ಪೌಂಡ್ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು. ಅಕ್ರಮ ಹಣದ ವಹಿವಾಟು ಆಗಿರುವ ಹಿನ್ನೆಲೆಯಲ್ಲಿ 2018ರಲ್ಲಿ ಆ ಪ್ರಕರಣವನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಗೆ ಕೈಗೆತ್ತಿಗೊಂಡಿದ್ದರು.
Income Tax officials investigating alleged tax evasion by businessman Robert Vadra -- the son-in-law of Congress chief Sonia Gandhi -- are recording his statement today. The case is linked to the properties he allegedly purchased in the United Kingdom through arms dealer Sanjay Bhandari.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm