ಬ್ರೇಕಿಂಗ್ ನ್ಯೂಸ್
11-05-26 06:20 pm HK News Staffer ದೇಶ - ವಿದೇಶ
ಕಾರವಾರ, ಮೇ 11: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ 22 ಮೀನುಗಾರರನ್ನು ಇತರ ಬೋಟ್‌ಗಳ ಮೀನುಗಾರರು ರಕ್ಷಿಸುವ ಮೂಲಕ ಭೀಕರ ದುರಂತವೊಂದು ತಪ್ಪಿದಂತಾಗಿದೆ.
ಕಾರವಾರ ತಾಲೂಕಿನ ಮುದಗಾ ಬಂದರಿನಿಂದ ಸುಮಾರು ಒಂದು ವಾರದ ಹಿಂದೆ ದಿನೇಶ್ ಕಾಂಚನ್ ಅವರಿಗೆ ಸೇರಿದ ‘ಶ್ರೀ ಅಮ್ಮ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾಗಿ ಬೋಟ್‌ಗೆ ನೀರು ನುಗ್ಗಿದೆ ಎನ್ನಲಾಗಿದೆ.
ಕ್ಷಣಾರ್ಧದಲ್ಲೇ ಬೋಟ್ ಸಮುದ್ರದ ಆಳಕ್ಕೆ ಮುಳುಗಿದರೂ, ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ 22 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರೂ ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯವರು ಎಂದು ತಿಳಿದುಬಂದಿದೆ.
ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಾರಿಕಾ ಬಲೆಗಳು, ಇಂಧನ ಹಾಗೂ ಸಂಗ್ರಹಿಸಿದ್ದ ಮೀನು ಸೇರಿ ಸುಮಾರು 1.5 ರಿಂದ 2 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸದ್ಯ ಎಲ್ಲ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದು, ಸ್ಥಳೀಯ ಮೀನುಗಾರ ಸಮುದಾಯದಲ್ಲಿ ಆತಂಕದ ಕ್ಷಣಗಳು ದೂರವಾದಂತಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm