ಬ್ರೇಕಿಂಗ್ ನ್ಯೂಸ್
19-05-26 01:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 19: ದೇಶಾದ್ಯಂತ ವಾಹನ ಸವಾರರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು 3 ರೂ. ಹೆಚ್ಚಳವಾಗಿದ್ದ ಬೆನ್ನಲ್ಲೇ, ಇಂದು ಮತ್ತೆ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆಯಿಂದ 96 ಪೈಸೆಯವರೆಗೆ ದರ ಏರಿಕೆಯಾಗಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ದರ 106.17 ರೂ.ನಿಂದ 107.16 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 94.10 ರೂ.ನಿಂದ 95.03 ರೂ.ಗೆ ತಲುಪಿದೆ.
ಸತತ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಾಗತಿಕ ಪರಿಸ್ಥಿತಿಯ ನೆಪದಲ್ಲಿ ಸರ್ಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ದೆಹಲಿ : ಪೆಟ್ರೋಲ್ 98.64 ರೂ., ಡೀಸೆಲ್ 91.58 ರೂ.
ಮುಂಬೈ : ಪೆಟ್ರೋಲ್ 107.59 ರೂ., ಡೀಸೆಲ್ 94.08 ರೂ.
ಕೋಲ್ಕತ್ತಾ : ಪೆಟ್ರೋಲ್ 109.70 ರೂ., ಡೀಸೆಲ್ 96.07 ರೂ.
ಚೆನ್ನೈ : ಪೆಟ್ರೋಲ್ 104.49 ರೂ., ಡೀಸೆಲ್ 96.11 ರೂ.
ಜನಜೀವನದ ಮೇಲೆ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತದೆ. ಸರಕು ಸಾಗಣೆ ವೆಚ್ಚ ಹೆಚ್ಚಾದಂತೆ ತರಕಾರಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬಸ್, ಟ್ಯಾಕ್ಸಿ, ಆಟೋ ದರ ಹೆಚ್ಚಳದ ಆತಂಕವೂ ಎದುರಾಗಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಸಾರಿಗೆ ಕ್ಷೇತ್ರದವರ ಮೇಲೆ ಹೆಚ್ಚುವರಿ ಒತ್ತಡ ಸೃಷ್ಟಿಯಾಗಿದೆ. ನಿರಂತರ ಇಂಧನ ದರ ಏರಿಕೆಯಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.
ಜಾಗತಿಕ ತೈಲ ಬಿಕ್ಕಟ್ಟು ಕಾರಣವೇ?
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದಂತೆ ತೈಲ ಪೂರೈಕೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಮುಂದುವರಿದಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm