ಬ್ರೇಕಿಂಗ್ ನ್ಯೂಸ್
22-05-26 05:57 pm HK News Staffer ದೇಶ - ವಿದೇಶ
ನವದೆಹಲಿ, ಮೇ 22: ಚುನಾವಣಾ ಆಯೋಗವು ಜೂನ್ 18ರಂದು ಹತ್ತು ರಾಜ್ಯಗಳ ವ್ಯಾಪ್ತಿಯನ್ನೊಳಗೊಂಡ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿದೆ. ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದೆ.
ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಬಹು ನಿರೀಕ್ಷಿತ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿರುತ್ತದೆ. 24 ರಾಜ್ಯಸಭಾ ಸದಸ್ಯರ ಅವಧಿ ಜೂನ್ 21ರಿಂದ ಜುಲೈ 19ರ ನಡುವೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳನ್ನು ಭರ್ತಿ ಮಾಡಲು ಆಯೋಗ ಮುಂದಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ.
ಚುನಾವಣೆ ಘೋಷಣೆ ಬೆನ್ನಲ್ಲೇ ರಾಜ್ಯಸಭೆ ಸದಸ್ಯರಾಗಲು ಆಕಾಂಕ್ಷಿತರ ಲಾಬಿ ಶುರುವಾಗಿದೆ. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳ ಪೈಕಿ ಅತಿ ಹೆಚ್ಚು ವಿಧಾನಸಭೆ ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನ ಗೆಲ್ಲಲು ಅವಕಾಶ ಇರುತ್ತದೆ. ಬಿಜೆಪಿ- ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ರಾಜ್ಯಸಭೆ ಸದಸ್ಯರೂ ಆಗಿರುವ ದೇವೇಗೌಡ ಅವರನ್ನು ಮುಂದುವರಿಸುವ ಸಾಧ್ಯತೆಯೂ ಇದೆ. ಅಂದಹಾಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ರಾಜ್ಯಸಭೆ ಚುನಾವಣೆ ಮತ್ತೆ ತಡೆಯಾಗಲಿದ್ದು ದೆಹಲಿಗೆ ತೆರಳಿ ಲಾಬಿ ನಡೆಸಲು ಮುಂದಾಗಿದ್ದ ತಂಡಕ್ಕೆ ಹಿನ್ನಡೆಯಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm