ಬ್ರೇಕಿಂಗ್ ನ್ಯೂಸ್
23-05-26 09:15 am HK News Staffer ದೇಶ - ವಿದೇಶ
ನವದೆಹಲಿ, ಮೇ 23: ದೇಶದಲ್ಲಿ ಇಂಧನ ದರಗಳು ಮತ್ತೆ ಏರಿಕೆಯಾಗಿದ್ದು, ಶನಿವಾರ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೊಮ್ಮೆ ಹೆಚ್ಚಳ ಮಾಡಿವೆ. ಪೆಟ್ರೋಲ್ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಲೀಟರ್‌ಗೆ 91 ಪೈಸೆ ಹೆಚ್ಚಳವಾಗಿದೆ.
ಈ ಏರಿಕೆಯಿಂದ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹107.14ಕ್ಕೆ ತಲುಪಿದ್ದು, ಡೀಸೆಲ್ ದರ ₹95.04 ಆಗಿದೆ.
ಇತ್ತೀಚಿನ ದಿನಗಳಲ್ಲಿ ಇದು ಮೇ ತಿಂಗಳಲ್ಲೇ ಮೂರನೇ ಬಾರಿ ಇಂಧನ ದರ ಏರಿಕೆಯಾಗಿದೆ. ಈ ವಾರದ ಆರಂಭದಲ್ಲಷ್ಟೇ ಲೀಟರ್‌ಗೆ ಸುಮಾರು 90 ಪೈಸೆ ಹೆಚ್ಚಳ ಮಾಡಲಾಗಿತ್ತು. ಅದಕ್ಕೂ ಮೊದಲು ತೈಲ ಮಾರುಕಟ್ಟೆ ಕಂಪನಿಗಳು ಏಕಕಾಲದಲ್ಲಿ ಸುಮಾರು ₹3ರಷ್ಟು ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದ್ದವು.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹99.51ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ₹92.49ಕ್ಕೆ ತಲುಪಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ₹110.57 ಹಾಗೂ ಡೀಸೆಲ್ ₹96.04 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ₹107.56 ಮತ್ತು ಡೀಸೆಲ್ ₹94.05 ಆಗಿದ್ದು, ಚೆನ್ನೈನಲ್ಲಿ ಪೆಟ್ರೋಲ್ ₹104.54 ಹಾಗೂ ಡೀಸೆಲ್ ₹96.16ಕ್ಕೆ ಮಾರಾಟವಾಗುತ್ತಿದೆ.
ಇಂಧನ ದರ ಏರಿಕೆಗೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಯುಎಸ್-ಇರಾನ್ ನಡುವಿನ ಅನಿಶ್ಚಿತತೆ ಹಾಗೂ ಜಾಗತಿಕ ಕಚ್ಚಾತೈಲ ಪೂರೈಕೆಯ ಆತಂಕದಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲ ಬೆಲೆ ಬ್ಯಾರೆಲ್‌ಗೆ 104 ಡಾಲರ್ ಮೀರಿದೆ. ಕೆಲ ಹಂತದಲ್ಲಿ ಅದು 111 ಡಾಲರ್‌ವರೆಗೂ ಏರಿಕೆಯಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆಯಾಗುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ತೈಲ ಕಂಪನಿಗಳು ಹಲವು ತಿಂಗಳುಗಳಿಂದ ಬೆಲೆ ಸ್ಥಿರವಾಗಿಟ್ಟಿದ್ದವು. ಆದರೆ ಈ ಅವಧಿಯಲ್ಲಿ ಸರ್ಕಾರಿ ತೈಲ ಕಂಪನಿಗಳು ಪ್ರತಿ ತಿಂಗಳು ಸುಮಾರು ₹1,000 ಕೋಟಿ ನಷ್ಟ ಅನುಭವಿಸುತ್ತಿದ್ದವು ಎನ್ನಲಾಗಿದೆ. ಇದೀಗ ಆ ನಷ್ಟದ ಭಾಗವೊಂದನ್ನು ಗ್ರಾಹಕರ ಮೇಲೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾತನಾಡಿ, ಜಾಗತಿಕ ಒತ್ತಡಗಳ ನಡುವೆಯೂ ದೇಶದಲ್ಲಿ ಇಂಧನ ಕೊರತೆ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದರು. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ದಿನನಿತ್ಯ ಬಳಕೆಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಸಾಮಾನ್ಯ ಜನರು ಹಾಗೂ ವಾಹನ ಸವಾರರ ಖರ್ಚು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm