ಬ್ರೇಕಿಂಗ್ ನ್ಯೂಸ್
25-05-26 10:19 am HK News Staffer ದೇಶ - ವಿದೇಶ
ನವದೆಹಲಿ, ಮೇ 25: ದೇಶದ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಇಂಧನ ಶಾಕ್ ನೀಡಿದ್ದು, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 11 ದಿನಗಳಲ್ಲೇ ಇದು ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರು ಹಾಗೂ ಸಾಮಾನ್ಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಮಾರು 3 ರೂ.ವರೆಗೆ ಹೆಚ್ಚಳ ಮಾಡಲಾಗಿದೆ.
ಇದರೊಂದಿಗೆ ಸಿಎನ್ಜಿ ದರವನ್ನೂ ಪ್ರತಿ ಕೆಜಿಗೆ 1 ರೂ. ಏರಿಕೆ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಮೂರನೇ ಬಾರಿಗೆ ಸಿಎನ್ಜಿ ದರ ಏರಿಕೆಯಾಗಿದೆ. ಒಟ್ಟಾರೆ ಸಿಎನ್ಜಿ ದರದಲ್ಲಿ ಸುಮಾರು 4 ರೂ.ಗಳಷ್ಟು ಹೆಚ್ಚಳ ಕಂಡುಬಂದಿದೆ.
ಹೊಸ ದರ ಪರಿಷ್ಕರಣೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 98.80 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 102.12 ರೂ. ಹಾಗೂ ಡೀಸೆಲ್ 95.20 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 113.51 ರೂ. ಮತ್ತು ಡೀಸೆಲ್ 99.82 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 111.21 ರೂ. ಆಗಿದ್ದರೆ, ಡೀಸೆಲ್ 97.83 ರೂ. ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 107.77 ರೂ. ಮತ್ತು ಡೀಸೆಲ್ 99.55 ರೂ. ಆಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ತೈಲ ಆಮದು ವೆಚ್ಚ ಹೆಚ್ಚಾಗಿದೆ. ಇದೇ ಕಾರಣದಿಂದ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಆ ನಷ್ಟವನ್ನು ತಗ್ಗಿಸಲು ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮೇ 15ರಂದು ಮೊದಲ ಬಾರಿಗೆ ಏಕಾಏಕಿ ಪ್ರತಿ ಲೀಟರ್ಗೆ ಸುಮಾರು 3 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸತತವಾಗಿ ದರ ಏರಿಕೆ ನಡೆಯುತ್ತಿದ್ದು, ಇದರ ಪರಿಣಾಮ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ದಿನನಿತ್ಯದ ಬದುಕಿನ ಮೇಲೂ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm