ಬ್ರೇಕಿಂಗ್ ನ್ಯೂಸ್
25-05-26 05:29 pm HK News Staffer ದೇಶ - ವಿದೇಶ
ನವದೆಹಲಿ, ಮೇ 25: ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದ್ದು ಅಂತಹ ಅಗತ್ಯ ಏನೂ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ, ವಿ.ಎಂ ಪಂಚೋಲಿ ಅವರಿದ್ದ ಪೀಠವು ಅರ್ಜಿಯನ್ನು ವಿಚಾರಣೆ ನಡೆಸಿತು.
'ಅರ್ಜಿದಾರರು ವಿಷಯವನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳುತ್ತಿರುವಂತೆ ಕಾಣುತ್ತಿದೆ, ಇದನ್ನು 'ತುಂಬಾ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ' ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಸಲಹೆ ಮಾಡಿದ್ದಾರೆ. ಪ್ರಕರಣದಲ್ಲಿ ಅಂತಹ ಗಂಭೀರ ತುರ್ತು ಏನಿಲ್ಲ. ನಾವು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಗಂಭೀರ ತುರ್ತು ಪರಿಸ್ಥಿತಿ ಕಾಣುತ್ತಿಲ್ಲ. ಅರ್ಜಿಯನ್ನು ನಂತರ ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ತಿಳಿಸಿದೆ.
ಅರ್ಜಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಅದರ ಚಟುವಟಿಕೆಗಳ ಕುರಿತಾಗಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಲಾಗಿತ್ತು. ಮೇ 15ರಂದು ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ಸಿಜೆಐ ಸೂರ್ಯಕಾಂತ್ ಅವರು ನಿರುದ್ಯೋಗಿಗಳನ್ನು 'ಜಿರಳೆ'ಗಳಿಗೆ ಹೋಲಿಸಿರುವುದು ವಿವಾದಕ್ಕೆ ಕಾರಣವಾಗಿತ್ತು.
ಉದ್ಯೋಗ ಸಿಗದ ಕೆಲವು ಯುವಕರು ಜಿರಳೆಗಳಂತೆ ವ್ಯವಸ್ಥೆಯ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯವಸ್ಥೆಯ ವಿಡಂಬನೆಗಾಗಿ ಕಾಕ್ರೋಚ್ ಜನತಾ ಪಾರ್ಟಿ ಹುಟ್ಟಿಕೊಂಡಿದ್ದು ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಸಿಜೆಐ ತಾವು ನಕಲಿ ಪದವೀಧರರನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದು ಎಂದು ಸ್ಪಷ್ಟನೆ ನೀಡಿದ್ದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm