ಬ್ರೇಕಿಂಗ್ ನ್ಯೂಸ್
27-06-26 09:10 pm HK News Staffer ದೇಶ - ವಿದೇಶ
ನವದೆಹಲಿ, ಜೂನ್ 27 : ದೇಶದಲ್ಲಿ ಮೂತ್ರಪಿಂಡ (ಕಿಡ್ನಿ) ಸೇರಿದಂತೆ ಅಂಗಾಂಗ ಕಸಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ಹೆಚ್ಚಿಸಲು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO) ಮಹತ್ವದ ಕ್ರಮ ಕೈಗೊಂಡಿದೆ. ದೇಶದ ಎಲ್ಲಾ ನೋಂದಾಯಿತ ಅಂಗಾಂಗ ಕಸಿ ಆಸ್ಪತ್ರೆಗಳು ತಮ್ಮ ವೆಬ್ಸೈಟ್ಗಳ ಮುಖಪುಟದಲ್ಲಿ (Homepage) ಕಸಿ ಪ್ರಕ್ರಿಯೆ ಫಲಿತಾಂಶಗಳ ದತ್ತಾಂಶಗಳನ್ನು ಕಡ್ಡಾಯವಾಗಿ ದಾಖಲು ಮಾಡಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆಯ ನೋಟೋ ಸಂಸ್ಥೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಂಗಾಂಗ ಕಸಿ ಪ್ರಕರಣಗಳಲ್ಲಿ ಪಾರದರ್ಶಕತೆ ತರಲು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO) ನಿರ್ದೇಶಕ ಡಾ. ಅನಿಲ್ ಕುಮಾರ್ ಅವರಿಗೆ ಪತ್ರ ಬರೆದ ಪರಿಣಾಮ ದೇಶದ ಎಲ್ಲಾ ನೋಂದಾಯಿತ ಅಂಗಾಂಗ ಕಸಿ ಆಸ್ಪತ್ರೆಗಳಿಗೆ ಹೊಸ ನಿಯಮ ಅನ್ವಯವಾಗಲಿದೆ. ಡಾ. ಅನಿಲ್ ಕುಮಾರ್ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸೂಕ್ತ ಪ್ರಾಧಿಕಾರಗಳಿಗೆ ಸಂಸದ ಚೌಟ ಅವರ ಪತ್ರ ಉಲ್ಲೇಖಿಸಿ ಈ ಕುರಿತ ಅಧಿಕೃತ ಆದೇಶ ನೀಡಿದ್ದಾರೆ.
ಮಂಗಳೂರಿನ ಆರೋಗ್ಯ ತಜ್ಞರಾದ ಶ್ಯಾಮ್ ಕಾಮತ್ ಮತ್ತು ಡಾ. ಲಿಯೋನೆಲ್ ಡಿಸೋಜಾ ಅವರು ಸಲ್ಲಿಸಿದ ಸಮಗ್ರ ವರದಿಯೊಂದನ್ನು ಆಧರಿಸಿ ಸಂಸದ ಕ್ಯಾ. ಚೌಟ ಪತ್ರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅಂಗಾಂಗ ಕಸಿ (Cadaveric Kidney Transplants) ಪ್ರಕ್ರಿಯೆಗಳ ನಂತರದ ಮರಣ ಪ್ರಮಾಣ ಮತ್ತು ದೀರ್ಘಕಾಲೀನ ನಿಗಾ ವ್ಯವಸ್ಥೆಯಲ್ಲಿರುವ ನ್ಯೂನತೆಗಳನ್ನು ಈ ವರದಿ ಎತ್ತಿ ತೋರಿಸಿತ್ತು.
ನೋಟೋ ಸೂಚನೆಯಲ್ಲಿ ಏನೇನಿದೆ?
ಸದ್ಯ ದೇಶಾದ್ಯಂತ 824 ಕಸಿ ಕೇಂದ್ರಗಳು ನೋಟೋ ಸಂಸ್ಥೆಯ ರಿಜಿಸ್ಟ್ರಿಯೊಂದಿಗೆ ಲಿಂಕ್ ಆಗಿದ್ದು, ರೋಗಿಗಳ ಮತ್ತು ದಾನಿಗಳ ದತ್ತಾಂಶಗಳನ್ನು ನಮೂದಿಸುವುದು ಕಡ್ಡಾಯವಾಗಲಿದೆ. ಪ್ರತಿ ಆಸ್ಪತ್ರೆ ಕೂಡ ತನ್ನಲ್ಲಿ ಮಾಡಿದ ಕಸಿ ಚಿಕಿತ್ಸೆಗಳ ಫಲಿತಾಂಶದ ಡೇಟಾವನ್ನು ವೆಬ್ಸೈಟ್ ನಲ್ಲಿ ದಾಖಲಿಸಬೇಕು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ 6 ತಿಂಗಳು, 1 ವರ್ಷ, 3 ವರ್ಷ ಮತ್ತು 5 ವರ್ಷಗಳ ಅವಧಿಯಲ್ಲಿ ಎಷ್ಟು ರೋಗಿಗಳು ಜೀವಂತವಾಗಿದ್ದಾರೆ, ಎಷ್ಟು ಜನ ಮೃತಪಟ್ಟಿದ್ದಾರೆ ಮತ್ತು ಎಷ್ಟು ಜನರಲ್ಲಿ ಕಸಿ ವಿಫಲವಾಗಿದೆ ಎಂಬ ವಿವರಗಳನ್ನು ಕಡ್ಡಾಯ ನಮೂದಿಸಬೇಕಾಗುತ್ತದೆ. ಕಸಿ ಪ್ರಕ್ರಿಯೆಗೆ ಮುನ್ನ ರೋಗಿ ಮತ್ತವರ ಕುಟುಂಬಕ್ಕೆ ಅದರಲ್ಲಿರುವ ಅಪಾಯಗಳು ಹಾಗೂ ಫಲಿತಾಂಶಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವುದನ್ನೂ ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಿ ಆಸ್ಪತ್ರೆಗಳು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ರಾಷ್ಟ್ರೀಯ ನೋಂದಣಿಗೆ ಸಕಾಲದಲ್ಲಿ ಸಂಪೂರ್ಣ ದತ್ತಾಂಶ ಸಲ್ಲಿಸುವಂತೆ ನೋಡಿಕೊಳ್ಳಬೇಕು ಎಂದು ನೋಟೋ ಆದೇಶ ನೀಡಿದೆ.
ಸಂಸದರ ಪತ್ರದಲ್ಲೇನಿತ್ತು?
ಅಂಗಾಂಗ ಕಸಿ ಯಶಸ್ವಿಯಾಗಬೇಕು ಎಂದು ಸಾರ್ವಜನಿಕರು ಬಯಸುತ್ತಾರೆ. ಆದರೆ ಕಸಿ ಪ್ರಕ್ರಿಯೆಯಲ್ಲಿನ ದೀರ್ಘಕಾಲೀನ ತೊಡಕುಗಳು, ವೈಫಲ್ಯಗಳು ಮತ್ತು ಕಸಿ ನಂತರದ ಸಾವುಗಳನ್ನು ಸಮರ್ಪಕವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಕಿಡ್ನಿ ಕಸಿಯ ಅಲ್ಪಾವಧಿ ಯಶಸ್ಸನ್ನು ಮಾತ್ರ ಬಿಂಬಿಸಲಾಗುತ್ತಿದ್ದು, ರೋಗಿಗಳು ದೀರ್ಘ ಕಾಲದವರೆಗೆ ಎದುರಿಸುವ ಸವಾಲುಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಕಸಿ ನಂತರ ನೀಡಲಾಗುವ ರೋಗ ನಿರೋಧಕ (Immunosuppressive) ಚಿಕಿತ್ಸೆಗಳಿಂದಾಗಿ ರೋಗಿಗಳು ತೀವ್ರ ಆರೋಗ್ಯ ತೊಂದರೆ, ದೀರ್ಘಕಾಲದ ವಿಷತ್ವ (Chronic Toxicity), ಶಾರೀರಿಕ ದೌರ್ಬಲ್ಯ ಮತ್ತು ಮಾರಕ ಸೋಂಕುಗಳಿಗೆ ಒಳಗಾಗುತ್ತಿದ್ದಾರೆ. ಕಸಿ ಪ್ರಕ್ರಿಯೆಯ ದೀರ್ಘಾವಧಿ ಪರಿಣಾಮದ ಮೇಲ್ವಿಚಾರಣೆ ಮಾಡಲು ರಾಷ್ಟ್ರೀಯ ನೋಂದಾವಣೆ ವ್ಯವಸ್ಥೆ ಇಲ್ಲ. ಡಿಸ್ಚಾರ್ಜ್ ಆದ ನಂತರದ ದೀರ್ಘಕಾಲದ ಬದುಕುಳಿಯುವಿಕೆ ಮತ್ತು ಮರಣದ ಕಾರಣಗಳನ್ನು ಪತ್ತೆಹಚ್ಚಲು ಕೇಂದ್ರೀಕೃತ ರಾಷ್ಟ್ರೀಯ ವ್ಯವಸ್ಥೆಯ ಕೊರತೆಯಿದೆ. ಆಸ್ಪತ್ರೆಗಳ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಹೆಚ್ಚಿಸಲು ಹಾಗೂ ರೋಗಿಗಳು ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ದತ್ತಾಂಶ ದಾಖಲೀಕರಣ ಸಹಾಯ ಮಾಡುತ್ತದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಮ್ಮ ಪತ್ರದಲ್ಲಿ ವಿವರಿಸಿದ್ದರು.
ಇದೊಂದು ಮೈಲಿಗಲ್ಲು; ಚೌಟ
2026ರ ಮೇ 22ರಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು NOTTO ನಿರ್ದೇಶಕರಿಗೆ ಪತ್ರ ಬರೆದಿದ್ದೆ. ಪತ್ರಕ್ಕೆ ತಕ್ಷಣ ಸ್ಪಂದಿಸಿ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿರುವುದು ನಿಜಕ್ಕೂ ಶ್ಲಾಘನೀಯ. ಆಸ್ಪತ್ರೆಗಳ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಇದೊಂದು ಮೈಲಿಗಲ್ಲು ಎಂದು ನಾನು ಭಾವಿಸುತ್ತೇನೆ ಎಂದು ಕ್ಯಾ.ಬ್ರಿಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
Under the leadership of Prime Minister Shri @narendramodi ji, people-centric governance is reflected in timely policy action that improves lives.
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 27, 2026
Following our representation seeking greater transparency and long-term outcome tracking in kidney transplantation, NOTTO has… pic.twitter.com/2YMTclQZ6n
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm