ಬ್ರೇಕಿಂಗ್ ನ್ಯೂಸ್
23-07-26 05:57 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 23 : ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಹಿರಿಯ ನಟ ನಾಸೀರುದ್ದೀನ್ ಶಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯುವಕರ ಮೇಲೆ ಪೊಲೀಸ್ ಗೂಂಡಾಗಳು ನಡೆಸುತ್ತಿರುವ ದೌರ್ಜನ್ಯವನ್ನು ನೋಡಿ ನಾನು ಭಾವುಕನಾಗಿದ್ದೇನೆ. ನನ್ನ ರಕ್ತ ಕುದಿಯುತ್ತಿದೆ. ನಿಮ್ಮ ಮಕ್ಕಳ ಬಗ್ಗೆ ಯೋಚಿಸಿ. ಇಂದು ನೀವು ಮಾಡುತ್ತಿರುವುದಕ್ಕೆ ನಾಳೆ ನಿಮ್ಮ ಮಕ್ಕಳು ಕರ್ಮಫಲವನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
"ಪ್ರಧಾನಿ ಮೋದಿ ಮೌನ ಹೊಸದೇನಲ್ಲ. ಅವರು ಯಾವ ಮಹತ್ವದ ವಿಚಾರದ ಬಗ್ಗೆ ಪ್ರಾಮಾಣಿಕವಾಗಿ ಮಾತನಾಡಿದ್ದಾರೆ? ಯಾವಾಗಲಾದರೂ 'ನಾವು ತಪ್ಪು ಮಾಡಿದ್ದೇವೆ' ಎಂದು ಒಪ್ಪಿಕೊಂಡಿದ್ದಾರೆಯೇ? ಅವರು ತಮ್ಮನ್ನು ದೇವರಿಂದ ವಿಶೇಷ ಆಶೀರ್ವಾದ ಪಡೆದ ನಾಯಕನಂತೆ ಬಿಂಬಿಸಿಕೊಂಡಿದ್ದಾರೆ. ಆ ಭ್ರಮೆ ಅವರ ಬೆಂಬಲಿಗರ ಮೇಲೂ ಪರಿಣಾಮ ಬೀರಿದೆ. ನಮ್ಮ ಸಮಾಜಕ್ಕೆ ಏನಾಗಿದೆ? ಈ ವ್ಯಕ್ತಿಯನ್ನು ಪ್ರಶ್ನಿಸುವವರು ಯಾರೂ ಇಲ್ವಾ ?" ಎಂದು ಕಿಡಿಕಾರಿದ್ದಾರೆ.
"ಮೋದಿ ಇದುವರೆಗೆ ಒಂದೇ ಒಂದು ಮುಕ್ತ ಪತ್ರಿಕಾಗೋಷ್ಠಿ ನಡೆಸಿಲ್ಲ. ಅವರು ಕಠಿಣ ಪ್ರಶ್ನೆಗಳಿಗೆ ಉತ್ತರಿಸಲು ಹೆದರುತ್ತಾರೆ. 2002ರ ಗುಜರಾತ್ ಗಲಭೆ, ರಾಜಕೀಯಕ್ಕೆ ಬರುವ ಮುನ್ನ ಹಿಮಾಲಯದಲ್ಲಿ ಧ್ಯಾನ ಮಾಡಿದ್ದೆ ಎನ್ನುವ ಹೇಳಿಕೆ, 35 ವರ್ಷ ಭಿಕ್ಷೆ ಬೇಡಿದ್ದೇನೆ ಎಂಬಂತಹ ಹೇಳಿಕೆಗಳ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದರೆ ಉತ್ತರಿಸಲು ಅವರಿಗೆ ಭಯವಿದೆ," ಎಂದು ಆರೋಪಿಸಿದರು.
ಜನರಿಗೆ ಪೆಟ್ರೋಲ್ ಉಳಿಸಿ ಎಂದು ಹೇಳುತ್ತಾರೆ. ಆದರೆ ತಾವೇ ಹಲವು ಎಸ್‌ಯುವಿ ವಾಹನಗಳ ಬೆಂಗಾವಲಿನಲ್ಲಿ ಸಂಚರಿಸುತ್ತಾರೆ. ವಿದೇಶ ಪ್ರವಾಸ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಾರೆ. ಆದರೆ ತಾವೇ ನಿರಂತರ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ. ಹಾಗಾಗಿ ನಾನು ಮೋದಿ ಹೇಳುವ ಅನೇಕ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm