ಬ್ರೇಕಿಂಗ್ ನ್ಯೂಸ್
25-07-26 03:07 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 25: ನೀಟ್ ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಹಾಗೂ ಯುವಜನರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಮಣಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ್ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸುತ್ತಿರುವ ಪ್ರತಿಭಟನೆಯ ತೀವ್ರತೆಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಕಳೆದ ನಾಲ್ಕು ದಶಕಗಳಿಂದ ನಾನು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಶ್ರಮಿಸಿದ್ದೇನೆ. ಈ ಹಂತದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಮತ್ತು ದೇಶದ ಶಿಕ್ಷಣ ವ್ಯವಸ್ಥೆಯ ಹಿತದೃಷ್ಟಿಯಿಂದ ಹಾಗೂ ಗೊಂದಲಗಳಿಗೆ ತೆರೆ ಎಳೆಯಲು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ" ಎಂದು ಹೇಳಿದ್ದಾರೆ.
ಕಳೆದ ಮೇ ತಿಂಗಳಿನಲ್ಲಿ ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಮತ್ತು ಇದರಿಂದ ಬೇಸತ್ತು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಬಗ್ಗೆ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದರೂ, ಆರೋಪಿಗಳ ಬಗ್ಗೆ ತುರ್ತಾಗಿ ಕಠಿಣ ಕ್ರಮ ಕೈಗೊಳ್ಳದಿರುವುದು ಮತ್ತು ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿಯ ವತಿಯಿಂದ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಕೈಗೊಂಡಿದ್ದು ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶದ ಅಲೆ ಎಬ್ಬಿಸಿತ್ತು.
ಸ್ಪರ್ಧಾತ್ಮಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ಶಿಕ್ಷಣದಲ್ಲಿ ಸುಧಾರಣೆ ತರಬೇಕು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗೆ ಹೊಣೆ ಹೊರಬೇಕೆಂದು ಸಿಜೆಪಿ ಮೂಲಕ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ್ದರು. ನಿರಂತರ ಪ್ರತಿಭಟನೆಯಿಂದ ಮೋದಿ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚಿದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಯನ್ನು ತೊರೆದಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm