ಬ್ರೇಕಿಂಗ್ ನ್ಯೂಸ್
26-07-26 01:32 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 26: ದೇಶಾದ್ಯಂತ ಭಾರಿ ಸಂಚಲನಕ್ಕೆ ಕಾರಣವಾಗಿದ್ದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಕೇಂದ್ರ ಸಚಿವ ಸಂಪುಟದಲ್ಲೇ ಮಹತ್ವದ ಬದಲಾವಣೆಗೆ ಕಾರಣವಾಗಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕರ್ನಾಟಕದ ಹಿರಿಯ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಹೊಸ ಹೊಣೆಗಾರಿಕೆ ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿದ ಜೋಶಿ, "ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲಿಟ್ಟಿರುವ ನಂಬಿಕೆಗೆ ಕೃತಜ್ಞನಾಗಿದ್ದೇನೆ. ಈ ಜವಾಬ್ದಾರಿಯನ್ನು ಸಂಪೂರ್ಣ ಕರ್ತವ್ಯ ಪ್ರಜ್ಞೆ ಹಾಗೂ ವಿನಮ್ರತೆಯಿಂದ ನಿರ್ವಹಿಸುತ್ತೇನೆ" ಎಂದು ಹೇಳಿದರು.
ದೇಶದ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಭರವಸೆ ನೀಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಕೊಡುಗೆಯನ್ನು ಶ್ಲಾಘಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಆರಂಭವಾಗಿರುವ ಸುಧಾರಣೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲಾಗುವುದು ಎಂದರು.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿ, ಪ್ರಸ್ತುತ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯಗಳ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಇದೀಗ ಈ ಇಲಾಖೆಗಳ ಜೊತೆಗೆ ದೇಶದ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನೂ ವಹಿಸಿಕೊಂಡಿದ್ದಾರೆ.
NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ, ದೇಶವ್ಯಾಪಿ ವಿದ್ಯಾರ್ಥಿ ಸಂಘಟನೆಗಳ ತೀವ್ರ ಪ್ರತಿಭಟನೆ ಮತ್ತು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತು ಮೂಡಿದ ಪ್ರಶ್ನೆಗಳ ನಡುವೆ ನಡೆದ ಈ ಬದಲಾವಣೆ ಮಹತ್ವ ಪಡೆದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಸುಧಾರಣೆ, ಪರೀಕ್ಷಾ ಪಾರದರ್ಶಕತೆ ಹಾಗೂ ವಿದ್ಯಾರ್ಥಿಗಳ ವಿಶ್ವಾಸ ಮರುಸ್ಥಾಪಿಸುವ ಸವಾಲು ಇದೀಗ ಪ್ರಹ್ಲಾದ್ ಜೋಶಿ ಅವರ ಮುಂದಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm