ಬ್ರೇಕಿಂಗ್ ನ್ಯೂಸ್
19-08-26 12:10 pm HK News Staffer ದೇಶ - ವಿದೇಶ
ನವದೆಹಲಿ, ಆ.19: ಭಾರತದ ರಾಷ್ಟ್ರಗೀತೆ 'ಜನ ಗಣ ಮನ' ಗೀತೆಯನ್ನು ಆ ಸ್ಥಾನಮಾನದಿಂದ ತೆಗೆದುಹಾಕಿ, ಅದರ ಜಾಗದಲ್ಲಿ ‘ವಂದೇ ಮಾತರಂ’ ಹಾಡನ್ನು ರಾಷ್ಟ್ರಗೀತೆಯನ್ನಾಗಿ ಮಾಡಬೇಕು ಎಂದು ಶಕ್ತಿಮಾನ್ ಖ್ಯಾತಿಯ ನಟ ಮುಖೇಶ್ ಖನ್ನಾ ಆಗ್ರಹ ಮಾಡಿದ್ದಾರೆ.
ವಂದೇಮಾತರಂ ಗೀತೆಯ ಪೂರ್ತಿ ಹಾಡಿನ ಕಡ್ಡಾಯದ ಬಗ್ಗೆ ಪರ- ವಿರೋಧ ಚರ್ಚೆ ಇರುವಾಗಲೇ ಖ್ಯಾತ ನಟ ಮುಖೇಶ್ ಖನ್ನಾ ಈ ಆಗ್ರಹ ಮಾಡಿರುವುದು ಮತ್ತೆ ಚರ್ಚೆಗೀಡಾಗಿದೆ. ಇತ್ತೀಚೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಆವೋ ಬಚ್ಚೋಂ ಎಂಬ ನೂತನ ದೇಶಭಕ್ತಿ ಗೀತೆಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನೀಡಿದ ಸಂದರ್ಶನದಲ್ಲಿ ಮುಖೇಶ್ ಖನ್ನಾ ಅವರು ರಾಷ್ಟ್ರಗೀತೆಯ ವಿಚಾರದಲ್ಲಿ ತಮ್ಮ ಅನಿಸಿಕೆ ತಿಳಿಸಿದ್ದಾರೆ.
‘ಜನ ಗಣ ಮನ ನಮ್ಮ ದೇಶದ ನಿಜವಾದ ರಾಷ್ಟ್ರಗೀತೆಯಲ್ಲ. ಅದನ್ನು ಬ್ರಿಟನ್ನಿನ ರಾಣಿ ಎಲಿಜಬೆತ್ ಅವರನ್ನು ಹೊಗಳಲು ರವೀಂದ್ರನಾಥ ಠಾಗೋರ್ ಅವರು ಬರೆದಿದ್ದರು. ಅದನ್ನೇ ನಾವು ರಾಷ್ಟ್ರಗೀತೆಯಾಗಿ ಸ್ವೀಕರಿಸಿ ಗೌರವಿಸುತ್ತ ಬಂದಿದ್ದೇವೆ. ಆದರೆ ಅದು ನಮ್ಮದಲ್ಲ. ವಂದೇ ಮಾತರಂ ಮಾತ್ರವೇ ನಮ್ಮ ನಿಜವಾದ ರಾಷ್ಟ್ರಗೀತೆ ಆಗಬೇಕು. ಲತಾ ಮಂಗೇಷ್ಕರ್ ಅವರು ಅದನ್ನು ಅತ್ಯಂತ ಸುಂದರವಾಗಿ ಹಾಡಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
‘ಜನ ಗಣ ಮನ ಗೀತೆಯನ್ನು ಆದಷ್ಟು ಬೇಗ ನಮ್ಮ ರಾಷ್ಟ್ರಗೀತೆಯ ಸ್ಥಾನದಿಂದ ತೆಗೆದುಹಾಕಬೇಕು ಮತ್ತು ವಂದೇ ಮಾತರಂ ಅನ್ನು ಅಧಿಕೃತವಾಗಿ ಜಾರಿಗೆ ತರಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಪ್ರತಿಯೊಂದು ಶಾಲೆಯಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯನ್ನು ಕಡ್ಡಾಯವಾಗಿ ಹಾಡಲಾಗುತ್ತಿದೆ’ ಎಂದು ಹೇಳಿದ್ದಾರೆ. ತಾವು ಕೂಡ ಸುಮಾರು 7 ನಿಮಿಷಗಳ ಸುದೀರ್ಘ ‘ವಂದೇ ಮಾತರಂ’ ಗೀತೆಯನ್ನು ರೆಕಾರ್ಡ್ ಮಾಡಿದ್ದು, ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮುಖೇಶ್ ಖನ್ನಾ ತಿಳಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm