ಬ್ರೇಕಿಂಗ್ ನ್ಯೂಸ್
02-10-26 10:23 am HK News Staffer ದೇಶ - ವಿದೇಶ
ಟೆಲ್ ಅವೀವ್, ಅ.2 : ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈ ದುಬೈ ವಿಮಾನದಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮೇಲೆ ಸಹ-ಪೈಲಟ್ ದಾಳಿ ನಡೆಸಿದ ಪ್ರಕರಣದ ತನಿಖೆ ತೀವ್ರಗೊಂಡಿದೆ. ಒಮಾನ್ ಪ್ರಜೆಯಾಗಿರುವ ಸಹ ಪೈಲಟ್ ಇಸ್ಲಾಮಿಸ್ಟ್ ತೀವ್ರವಾದಿ ವಿಚಾರಧಾರೆಯಿಂದ ಪ್ರಭಾವಿತನಾಗಿದ್ದ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಆತನಿಗೆ ಇಸ್ಲಾಮಿಕ್ ಉಗ್ರವಾದಿ ಸಂಘಟನೆಯ ನಂಟು ಇತ್ತೇ ಎನ್ನುವ ಕುರಿತಾಗಿ ತನಿಖೆ ನಡೆಸಲಾಗುತ್ತಿದೆ.




ಸೆಪ್ಟೆಂಬರ್ 30ರಂದು ಫ್ಲೈದುಬೈ FZ1073 ವಿಮಾನ ದುಬೈನಿಂದ ಟೆಲ್ ಅವೀವ್ಗೆ ಹೊರಟಿತ್ತು. ವಿಮಾನದಲ್ಲಿ 174 ಮಂದಿ ಪ್ರಯಾಣಿಸುತ್ತಿದ್ದು, ಹಾರಾಟದ ವೇಳೆ ಕಾಕ್ಪಿಟ್ನಲ್ಲಿ ಸಹ ಪೈಲಟ್ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಮಚ್ಚರ್ ಗಂಭೀರವಾಗಿ ಗಾಯಗೊಂಡಿದ್ದು, ಇದೇ ವೇಳೆ ವಿಮಾನ ಕೆಲವೇ ಕ್ಷಣಗಳಲ್ಲಿ 14,000 ಅಡಿಗೂ ಹೆಚ್ಚು ಕೆಳಕ್ಕೆ ಜಾರಿತ್ತು. ಫ್ಲೈಟ್ ಟ್ರ್ಯಾಕಿಂಗ್ ಮಾಹಿತಿಯ ಪ್ರಕಾರ, ಸುಮಾರು 30 ಸೆಕೆಂಡ್ಗಳಲ್ಲಿ ವಿಮಾನ 33 ಸಾವಿರ ಅಡಿಯಿಂದ 17 ಸಾವಿರ ಅಡಿ ಎತ್ತರಕ್ಕೆ ಕುಸಿದಿತ್ತು. ಇದರಿಂದಾಗಿ ಪ್ರಯಾಣಿಕರು ತೀವ್ರ ಗಲಿಬಿಲಿಗೆ ಒಳಗಾಗಿದ್ದರು.
ಇದೇ ವೇಳೆ, ಗಂಭೀರ ಗಾಯಗೊಂಡಿದ್ದರೂ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಕಾಕ್ಪಿಟ್ ಬಾಗಿಲನ್ನು ತೆರೆದಿದ್ದು ಪ್ರಯಾಣಿಕರಿಗೆ ಹಲ್ಲೆ ವಿಷಯ ತಿಳಿಯುವಂತಾಗಿತ್ತು. ಇದರಿಂದ ಪ್ರಯಾಣಿಕರು ಮತ್ತು ಇತರ ಸಿಬ್ಬಂದಿ ಒಳನುಗ್ಗಿ ಸಹ ಪೈಲಟ್ನನ್ನು ಹಿಡಿದು ಹೊರಗೆ ದಬ್ಬಲು ನೆರವಾಗಿದ್ದರು. ಬಳಿಕ ವಿಮಾನದಲ್ಲಿದ್ದ ಹೆಚ್ಚುವರಿ ಸಿಬ್ಬಂದಿ ನಿಯಂತ್ರಣ ವಹಿಸಿಕೊಂಡು, ವಿಮಾನವನ್ನು ಸೌದಿ ಅರೇಬಿಯಾದ ತಬೂಕ್ ವಿಮಾನ ನಿಲ್ದಾಣಕ್ಕೆ ತಿರುಗಿಸಿ ಸುರಕ್ಷಿತವಾಗಿ ಇಳಿಸಲಾಗಿತ್ತು. ಘಟನೆಯ ವೇಳೆ ತೋರಿದ ಧೈರ್ಯಕ್ಕಾಗಿ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ನೆತನ್ಯಾಹು ಸೇರಿದಂತೆ ಹಲವರು ಶ್ಲಾಘಿಸಿದ್ದಾರೆ.
ಫಾಕ್ಸ್ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ನೆತನ್ಯಾಹು, ಸಹ-ಪೈಲಟ್ನನ್ನು ನಿಯಂತ್ರಣಕ್ಕೆ ಪಡೆದ ಬಳಿಕ ಆತ “ನನ್ನನ್ನು ಕೊಲ್ಲು ಕೊಲ್ಲು” ಎಂದು ಕೂಗಿದ್ದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆತ ಆತ್ಮಹತ್ಯೆ ಉದ್ದೇಶದಲ್ಲಿದ್ದಂತೆ ಕಂಡುಬಂದಿದೆ. ವಿಮಾನವನ್ನು ಉದ್ದೇಶಪೂರ್ವಕ ಪತನಗೊಳಿಸಲು ಪ್ರಯತ್ನಿಸಿದ್ದ ಸಾಧ್ಯತೆಯೂ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ. ಆದರೆ ದಾಳಿಯ ಅಂತಿಮ ಉದ್ದೇಶದ ಬಗ್ಗೆ ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.
ಆದರೆ ಸಹ ಪೈಲಟ್ ಇಸ್ಲಾಮಿಸ್ಟ್ ತೀವ್ರವಾದಿ ವಿಚಾರಧಾರೆಯಿಂದ ಪ್ರಭಾವಿತನಾಗಿದ್ದ ಎಂದು ನೆತನ್ಯಾಹು ಹೇಳಿದ್ದಾರೆ. ಆದರೆ ಈ ಹೇಳಿಕೆಗೆ ಸಂಬಂಧಿಸಿದಂತೆ ವಿವರವಾದ ಸಾಕ್ಷ್ಯಗಳನ್ನು ಅವರು ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ತನಿಖೆಯಲ್ಲಿ ದಾಳಿಯ ಉದ್ದೇಶ, ಪೂರ್ವಯೋಜನೆ, ಯಾವುದೇ ಸಂಘಟನೆಯ ಸಂಪರ್ಕ ಹಾಗೂ ಭಯೋತ್ಪಾದಕ ಚಟುವಟಿಕೆಯ ಸಾಧ್ಯತೆ ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.
ಪ್ರಕರಣದಲ್ಲಿ ಇರಾನ್ ಪಾತ್ರವಿದೆಯೇ ಎಂಬ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮಗೆ ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಇರಾನ್ ಸಂಪರ್ಕದ ಸಾಧ್ಯತೆಯನ್ನು ಸೂಚಿಸಿದ್ದಾರೆ. ಆದರೆ ಈವರೆಗೆ ಇರಾನ್ ನೇರವಾಗಿ ದಾಳಿಯಲ್ಲಿ ಭಾಗಿಯಾಗಿರುವುದು ದೃಢಪಟ್ಟಿಲ್ಲ. ನೆತನ್ಯಾಹು ಕೂಡ ಇರಾನ್ ಪಾತ್ರದ ಬಗ್ಗೆ ಅಂತಿಮವಾಗಿ ಹೇಳಲು ಇದು ಇನ್ನೂ ಸಮಯವಲ್ಲ ಎಂದು ತಿಳಿಸಿದ್ದಾರೆ.
ಇಸ್ರೇಲ್ ಮತ್ತು ಒಮಾನ್ ನಡುವೆ ಅಧಿಕೃತ ರಾಜತಾಂತ್ರಿಕ ಸಂಬಂಧಗಳಿಲ್ಲದ ಹಿನ್ನೆಲೆಯಲ್ಲಿ, ಇಸ್ರೇಲ್ಗೆ ತೆರಳುವ ವಿಮಾನ ಸಿಬ್ಬಂದಿಯ ಭದ್ರತಾ ಪರಿಶೀಲನಾ ಪ್ರಕ್ರಿಯೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ. ಘಟನೆಯ ಬಳಿಕ ಇಸ್ರೇಲ್ನಲ್ಲಿ ಪೈಲಟ್ಗಳ ಭದ್ರತಾ ಪರಿಶೀಲನೆ ಕುರಿತು ಪರಿಶೀಲನೆ ಆರಂಭವಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಗಂಭೀರ ಗಾಯಗೊಂಡ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ತಬೂಕ್ನಲ್ಲಿ ತುರ್ತು ಚಿಕಿತ್ಸೆ ನೀಡಿದ ಬಳಿಕ ಯುಎಇಗೆ ಏರ್ಲಿಫ್ಟ್ ಮಾಡಲಾಗಿದೆ. ಭಾರತೀಯ ರಾಯಭಾರ ಕಚೇರಿಯ ಪ್ರಕಾರ ಮಚ್ಚರ್ ಆರೋಗ್ಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಘಟನೆಯ ಕುರಿತು ಫ್ಲೈದುಬೈ ಸ್ವತಂತ್ರ ತನಿಖೆಯನ್ನೂ ನಡೆಸುತ್ತಿದೆ. ದುಬೈ–ಟೆಲ್ ಅವೀವ್ ನಡುವಿನ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೌದಿ ಅರೇಬಿಯಾ, ಯುಎಇ ಮತ್ತು ಇಸ್ರೇಲ್ನ ಸಂಬಂಧಪಟ್ಟ ಸಂಸ್ಥೆಗಳು ಘಟನೆಯ ವಿವಿಧ ಆಯಾಮಗಳನ್ನು ಪರಿಶೀಲಿಸುತ್ತಿವೆ.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 05:24 pm
HK News Staffer
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm