ಬ್ರೇಕಿಂಗ್ ನ್ಯೂಸ್
11-10-26 02:34 pm HK News Staffer ದೇಶ - ವಿದೇಶ
ರಿಯಾದ್, ಅ.11: ಸೌದಿ ಅರೇಬಿಯಾದ ರಿಯಾದ್ ನಗರದ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಶನಿವಾರ ನಡೆದ ಬಾಂಬ್ ದಾಳಿಯಲ್ಲಿ ಅಮೆರಿಕದ ಪ್ರಜೆ ಸೇರಿದಂತೆ 12 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ನೀಡಿರುವ ಮಾಹಿತಿಗಳ ಪ್ರಕಾರ, ಮೃತಪಟ್ಟವರಲ್ಲಿ ನಾಲ್ವರು ಸೌದಿ ಪ್ರಜೆಗಳು, ಇಬ್ಬರು ಬಾಂಗ್ಲಾದೇಶದವರು ಹಾಗೂ ಈಜಿಪ್ಟ್, ಜೋರ್ಡಾನ್, ಸಿರಿಯಾ, ಪ್ಯಾಲೆಸ್ತೀನ್ ಮತ್ತು ಸುಡಾನ್ನ ತಲಾ ಒಬ್ಬರು ಸೇರಿದ್ದಾರೆ.
ಇರಾನ್ ಯುದ್ಧದ ಬಳಿಕ ಯೆಮೆನ್ ದೇಶದ ಹೌತಿ ಬಂಡುಕೋರರು ಸೌದಿ ಅರೇಬಿಯಾ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದೆ. ಸೌದಿ ಕಡೆಯಿಂದಲೂ ಹೌತಿಗಳ ವಿರುದ್ಧ ದಾಳಿಯಾಗುತ್ತಿದೆ. ಇದೇ ವೇಳೆ, ರಿಯಾದ್ ಏರ್ಪೋರ್ಟ್ ಮೇಲೆ ಬಾಂಬ್ ದಾಳಿಯಾಗಿದ್ದು ಹಲವು ದೇಶಗಳ ಪ್ರಜೆಗಳು ಸಾವು ಕಂಡಿದ್ದಾರೆ. ಸೌದಿ ಅರೇಬಿಯಾ ಪರವಾಗಿ ಅಮೆರಿಕವೂ ದಾಳಿಯಲ್ಲಿ ಭಾಗಿಯಾಗಬೇಕೇ ಎಂಬುದನ್ನು ಪರಿಶೀಲಿಸುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದೇ ವೇಳೆ ರಿಯಾದ್ ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಅಮೆರಿಕ ತೀವ್ರವಾಗಿ ಖಂಡಿಸಿದೆ. ಟ್ರಂಪ್ ಆಡಳಿತವು ಸೌದಿ ಅರೇಬಿಯಾದ ಪಾಲುದಾರರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.



ಶನಿವಾರದ ದಾಳಿಯ ಹೊಣೆಯನ್ನು ಹೌತಿ ಬಂಡುಕೋರರು ಇನ್ನೂ ಹೊತ್ತುಕೊಂಡಿಲ್ಲ. ಆದರೆ, ವಾರದ ಆರಂಭದಲ್ಲಿ ಇದೇ ವಿಮಾನ ನಿಲ್ದಾಣದ ಮೇಲೆ ನಡೆಸಿದ ದಾಳಿಯಲ್ಲಿ ಪೈಲಟ್ ಸೇರಿದಂತೆ ಮೂವರು ಸೌದಿ ಪ್ರಜೆಗಳು ಮೃತಪಟ್ಟಿದ್ದರು ಎಂದು ಹೌತಿಗಳು ಹೇಳಿಕೊಂಡಿದ್ದರು. ಈ ದಾಳಿಯಲ್ಲಿ ದೇಶೀಯ ವಿಮಾನಗಳ ಟರ್ಮಿನಲ್ಗಳಾದ 3 ಮತ್ತು 4 ಇರುವ ಸಂಕೀರ್ಣದ ಮೇಲೆ ಕ್ಷಿಪಣಿ ಅಪ್ಪಳಿಸಿದೆ ಎಂದು ಪ್ರಾದೇಶಿಕ ಅಧಿಕಾರಿಗಳು ತಿಳಿಸಿದ್ದಾರೆ.
ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು, ಸೇನಾ ನೆಲೆಗಳು ಮತ್ತು ತೈಲ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿಗಳು ಹೆಚ್ಚಾಗಿವೆ. ಇದೇ ವೇಳೆ, ಹೌತಿ ನಿಯಂತ್ರಣದಲ್ಲಿರುವ ಯೆಮನ್ ರಾಜಧಾನಿ ಸನಾದ ವಿಮಾನ ನಿಲ್ದಾಣದ ಮೇಲೆ ಸೌದಿ ಅರೇಬಿಯಾ ದಾಳಿ ನಡೆಸಿದೆ ಎಂದು ಬಂಡುಕೋರರು ಆರೋಪಿಸಿದ್ದಾರೆ. ಯೆಮನ್ ದೇಶದ ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಹ್ಯಾನ್ಸ್ ಗ್ರುಂಡ್ಬರ್ಗ್, ರಿಯಾದ್ ಮೇಲಿನ ದಾಳಿಯನ್ನು “ಅಪಾಯಕಾರಿ ಉಲ್ಬಣ” ಎಂದು ಬಣ್ಣಿಸಿದ್ದು, ಇದು ಪ್ರಾದೇಶಿಕ ಭದ್ರತೆಗೆ ಗಂಭೀರ ಬೆದರಿಕೆಯಾಗಿದೆ ಎಂದು ಎಚ್ಚರಿಸಿದ್ದಾರೆ.
ದಾಳಿಯ ಹಿನ್ನೆಲೆಯಲ್ಲಿ ರಿಯಾದ್ ವಿಮಾನ ನಿಲ್ದಾಣದಲ್ಲಿ ಎಲ್ಲ ರೀತಿಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಧಿಕೃತ ಸೂಚನೆಯ ಪ್ರಕಾರ, ಇಂದು ಮಧ್ಯರಾತ್ರಿಯ ವರೆಗೆ ಕಾರ್ಯಾಚರಣೆ ಸ್ಥಗಿತಗೊಂಡಿರಲಿದೆ. ವಿಮಾನ ನಿಲ್ದಾಣದ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಎಲ್ಲ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಗಿದೆ. ವಿಮಾನಗಳ ಸಂಚಾರದ ಮಾಹಿತಿ ನೀಡುವ ಫ್ಲೈಟ್ ರಾಡಾರ್ 24 ಪ್ರಕಾರ, ಹಲವು ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ. ಅಮೆರಿಕ, ಬ್ರಿಟನ್, ಜರ್ಮನಿ, ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ತಮ್ಮ ನಾಗರಿಕರಿಗೆ ವಿಮಾನ ನಿಲ್ದಾಣದಿಂದ ದೂರವಿರುವಂತೆ ಎಚ್ಚರಿಕೆ ನೀಡಿವೆ. ವಿಶ್ವದ ಅತಿದೊಡ್ಡ ತೈಲ ರಫ್ತುದಾರ ರಾಷ್ಟ್ರವಾಗಿರುವ ಸೌದಿ ಅರೇಬಿಯಾದ ಮೇಲಿನ ದಾಳಿಗಳು ಜಾಗತಿಕ ಮಾರುಕಟ್ಟೆ ಮತ್ತು ಪ್ರಾದೇಶಿಕ ಸ್ಥಿರತೆಯ ಮೇಲೆ ಆತಂಕ ಮೂಡಿಸಿವೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm