ಬ್ರೇಕಿಂಗ್ ನ್ಯೂಸ್
12-10-26 05:22 pm HK News Staffer ದೇಶ - ವಿದೇಶ
ನವದೆಹಲಿ, ಅ.12: ರಾಜಧಾನಿ ದೆಹಲಿಯಲ್ಲಿ ಧರಣಿ ಹಾಗೂ ಪ್ರತಿಭಟನೆಗಳಿಗೆ ಹೆಸರಾಗಿದ್ದ ಜಂತರ್ ಮಂತರ್ ಆವರಣದಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಪ್ರತಿಭಟನೆ ಮಾಡುವಂತಿಲ್ಲ. ಈ ಬಗ್ಗೆ ದೆಹಲಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ ಮತ್ತು ಸಂಸತ್ ಭವನದ ಬಳಿಯಿರುವ ಐತಿಹಾಸಿಕ ತಾಣ ಜಂತರ್ ಮಂತರ್ ಆವರಣವನ್ನು ಪ್ರತಿಭಟನೆ ನಡೆಸುವ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದೆ. ಇನ್ಮುಂದೆ ಜಂತರ್ ಮಂತರ್ನಲ್ಲಿ ಯಾವುದೇ ರೀತಿಯ ಧರಣಿ, ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಲು ಅವಕಾಶವಿರುವುದಿಲ್ಲ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ರಚಿಸಿದ್ದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಕಚೇರಿ ಅಧಿಕೃತ ಆದೇಶ ಹೊರಡಿಸಿದೆ.
ಇದರ ಬದಲಾಗಿ, ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಪೂರ್ವ ದೆಹಲಿಯ ಸಿಬಿಡಿ ಮೈದಾನದಲ್ಲಿ ಪ್ರತಿಭಟನೆ ನಡೆಸಬಹುದು ಎಂದು ತಿಳಿಸಲಾಗಿದೆ. ನೂತನವಾಗಿ ಗುರುತಿಸಲಾಗಿರುವ ಈ ಮೂರು ಮೈದಾನಗಳಲ್ಲಿ ಪ್ರತಿಭಟನೆ ಅಥವಾ ಧರಣಿಗಳನ್ನು ಆಯೋಜಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ದೆಹಲಿ ಪೊಲೀಸ್ ಇಲಾಖೆ ತಿಳಿಸಿದೆ.
ಸುಪ್ರೀಂ ಕೋರ್ಟ್ ಕೂಡ ಈ ಹಿಂದೆ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುವುದರಿಂದ ಎದುರಾಗುವ ಟ್ರಾಫಿಕ್ ಸಮಸ್ಯೆಗಳನ್ನು ಉಲ್ಲೇಖಿಸಿತ್ತು. ಅಲ್ಲದೆ, ಪ್ರತಿಭಟನೆಗೆ ಬೇರೆ ಜಾಗಗಳನ್ನು ಸೂಚಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿತ್ತು. ಜಂತರ್ ಮಂತರ್ ಹತ್ತಿರವೇ ಸುಪ್ರೀಂ ಕೋರ್ಟ್, ಸಂಸತ್ ಭವನ ಇರುವ ಕಾರಣ ಅಲ್ಲಿ ಪ್ರತಿಭಟನೆ ನಡೆಸುವುದರಿಂದ ತೊಂದರೆ ಉಂಟಾಗಿತ್ತು. ಬೃಹತ್ ಪ್ರತಿಭಟನೆಗಳಿಗೆ ಕರೆ ನೀಡಿದರೆ ಭದ್ರತಾ ಲೋಪ, ಟ್ರಾಫಿಕ್ ಸಮಸ್ಯೆ ಎದುರಾಗುತ್ತಿತ್ತು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm