ಬ್ರೇಕಿಂಗ್ ನ್ಯೂಸ್
14-10-26 04:59 pm HK News Staffer ದೇಶ - ವಿದೇಶ
ಚೆನ್ನೈ, ಅ.14: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಬದಲಾವಣೆಗಾಗಿ ಪಣ ತೊಟ್ಟಿರುವ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ತಮ್ಮ ‘ವೀ ದ ಲೀಡರ್ಸ್’ (WTL) ಸಂಘಟನೆಯನ್ನು ಚುನಾವಣಾ ಅಖಾಡಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ. ಮುಂದಿನ ವರ್ಷ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಡಬ್ಲ್ಯುಟಿಎಲ್ ಸ್ಪರ್ಧಿಸಲಿದೆ ಎಂದು ಅವರು ಘೋಷಿಸಿದ್ದಾರೆ.
ನಮ್ಮ ನಾಯಕರು ಶ್ರಮಿಸಿ ಜನರ ಪ್ರೀತಿ ಗಳಿಸಲಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ವೀ ದ ಲೀಡರ್ಸ್ ಬದಲಾವಣೆಯ ಸಂಕೇತವಾಗಲಿದೆ’ ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೂನ್ 5ರಂದು ಬಿಜೆಪಿಗೆ ರಾಜೀನಾಮೆ ನೀಡಿದ ಅಣ್ಣಾಮಲೈ, ಅದೇ ದಿನ WTL ಸ್ಥಾಪಿಸಿದ್ದರು. ಆರಂಭದಲ್ಲಿ ತಳಮಟ್ಟದ ರಾಜಕೀಯ ಚಳವಳಿಯಾಗಿ ರೂಪುಗೊಂಡ ಈ ಸಂಘಟನೆಯನ್ನು ಮುಂದೆ ಪೂರ್ಣ ಪ್ರಮಾಣದ ರಾಜಕೀಯ ಪಕ್ಷವಾಗಿ ಬೆಳೆಸುವುದು ಅವರ ಉದ್ದೇಶವಾಗಿತ್ತು. 2031ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು, ಅದಕ್ಕೂ ಮುನ್ನ ರಾಜ್ಯದಾದ್ಯಂತ ಸಂಘಟನೆಯ ನೆಲೆಯನ್ನು ಬಲಪಡಿಸಲು ಅವರು ಮುಂದಾಗಿದ್ದಾರೆ.
ಈ ವರ್ಷದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ದಶಕಗಳಿಂದ ರಾಜ್ಯ ರಾಜಕೀಯವನ್ನು ನಿಯಂತ್ರಿಸುತ್ತಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳನ್ನು ಮೂಲೆಗುಂಪು ಮಾಡಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಅಣ್ಣಾಮಲೈ ಕೂಡ ಹೊಸ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುವ ಪ್ರಯತ್ನಕ್ಕೆ ವೇಗ ನೀಡಿದ್ದಾರೆ.
ತಮಿಳುನಾಡಿನ ವಿಚಾರದಲ್ಲಿ ಬಿಜೆಪಿಯ ಕೇಂದ್ರ ನಾಯಕತ್ವ ಅನುಸರಿಸುತ್ತಿದ್ದ ಧೋರಣೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರದ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಅಣ್ಣಾಮಲೈ ಪಕ್ಷ ತೊರೆದಿದ್ದರು. ಆಗಸ್ಟ್ನಲ್ಲಿ ನಡೆದ ‘ಇಂಡಿಯಾ ಟುಡೇ ರೌಂಡ್ಟೇಬಲ್ ತಮಿಳುನಾಡು’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ತಮಿಳುನಾಡು ಬದಲಾವಣೆಗೆ ಸಿದ್ಧವಾಗಿದೆ. ಆದರೆ, ದಿಲ್ಲಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಯಾವಾಗಲೂ ರಾಜ್ಯದ ಜನರ ಆಕಾಂಕ್ಷೆಗಳಿಗೆ ಅನುಗುಣವಾಗಿರುವುದಿಲ್ಲ ಎಂದು ಹೇಳಿದ್ದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm