ಬ್ರೇಕಿಂಗ್ ನ್ಯೂಸ್
11-01-21 12:13 pm Headline Karnataka News Network ದೇಶ - ವಿದೇಶ
ಮುಂಬೈ, ಜ.11 : ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಹರಡಿರುವುದಾಗಿ ದೃಢಪಡಿಸಲಾಗಿದೆ. ಮುರುಂಬಾ ಎಂಬ ಗ್ರಾಮದಲ್ಲಿ ಇಲ್ಲಿಯವರೆಗೂ ಸುಮಾರು 900 ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿದೆ. ಅಲ್ಲಿನ ಜಿಲ್ಲಾಡಳಿತ ಸತ್ತ ಕೋಳಿಯ ರಕ್ತದ ಮಾದರಿಯನ್ನು ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು.
ವರದಿಯಲ್ಲಿ ಕೋಳಿಗಳು ಹಕ್ಕಿ ಜ್ವರದಿಂದ ಮೃತಪಟ್ಟಿರುವುದು ಖಚಿತಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭಾನ್ ತಿಳಿಸಿದ್ದಾರೆ.
ಸುದ್ದಿ ಮಾಧ್ಯಮದಲ್ಲಿ ಮಾತನಾಡಿದ ಮುಲ್ಜಿಕರ್ ಹಕ್ಕಿ ಜ್ವರದಿಂದ ಮಾನಷ್ಯರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಜನರನ್ನು ನಾವು ಈಗಾಗಲೇ ಪರೀಕ್ಷೆಗೆ ಒಳಪಡಿಸಿದ್ದೇವೆ. ಹಾಗಾಗಿ ಹಕ್ಕಿ ಜ್ವರ ಮನುಷ್ಯರಿಗೆ ಹರಡುತ್ತದೆ ಎಂದು ಯಾರು ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಮುನ್ನ ಕೇಂದ್ರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹಕ್ಕಿಜ್ವರ ಹರಡಿರುವದನ್ನು ದೃಢಪಡಿಸಿತ್ತು. ಈಗಾಗಲೇ ರೋಗ ಪೀಡಿತ ಪ್ರದೇಶಗಳಲ್ಲಿ ಹಕ್ಕಿ ಜ್ವರ ತಡೆಗಟ್ಟಲು ಎಲ್ಲ ರೀತಿಯ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.

ಹಕ್ಕಿ ಜ್ವರ ಹರಡಿರುವ ಪ್ರದೇಶಗಳ ಕುರಿತಂತೆ ವಿಚಾರಣೆ ನಡೆಸಲು ಕೇಂದ್ರ ತಂಡಗಳನ್ನು ದೇಶದಲ್ಲಿ ರಚಿಸಲಾಗಿದ್ದು, ತಂಡಗಳು ಇದೀಗ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ. ಕೇಂದ್ರ ತಂಡವೊಂದು ಜನವರಿ 9 ರಂದು ಕೇರಳ ರಾಜ್ಯಕ್ಕೆ ತಲುಪಿದ್ದು ಪ್ರಸ್ತುತ ಅಲ್ಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಂಕ್ರಾಮಿಕ ರೋಗ ಕುರಿತಾಗಿ ತನಿಖೆ ನಡೆಸಲು ಆರಂಭಿಸಿದೆ. ಮತ್ತೊಂದು ತಂಡ ಜನವರಿ 10 ರಂದು ಹಿಮಾಚಲ ಪ್ರದೇಶಕ್ಕೆ ತಲುಪಿದ್ದು ಅಲ್ಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಹಕ್ಕಿ ವಿಚಾರವಾಗಿ ತಪ್ಪು ಮಾಹಿತಿ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹಾಗೂ ರೋಗ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
Bird flu has been confirmed as the cause of death of around 900 hens in the last few days at a poultry farm in Maharashtra’s Parbhani district, a senior official said on Monday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm