ಬ್ರೇಕಿಂಗ್ ನ್ಯೂಸ್
24-11-26 08:45 pm HK News Staffer ದೇಶ - ವಿದೇಶ
ಮುಂಬೈ, ನ.24: ಮುಂಬೈನ ಪ್ರಮುಖ ನೌಕಾನೆಲೆಯಲ್ಲಿ ದೇಶದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ನೌಕಾನೆಲೆಯಲ್ಲಿ ತರಬೇತಿ ಪಡೆಯುತ್ತಿದ್ದ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನೌಕಾನೆಲೆಯಿಂದ ಸುಮಾರು 90 ರಹಸ್ಯ ವಿಡಿಯೋಗಳನ್ನು ಚಿತ್ರೀಕರಿಸಿದ್ದಲ್ಲದೆ, ಪಾಕಿಸ್ತಾನದ ಗುಪ್ತಚರ ಏಜೆಂಟ್ಗಳಿಗೆ ಹಂಚಿದ್ದಾನೆಂಬ ಆರೋಪ ಕೇಳಿಬಂದಿದೆ.
ಬಂಧಿತ ವ್ಯಕ್ತಿಯನ್ನು ಮುಂಬೈನ ಕೊಲಾಬಾ ಪ್ರದೇಶದ ಬಧ್ವಾರ್ ಪಾರ್ಕ್ ನಿವಾಸಿ ಬಂಟಿ ರಾಮಪ್ರಕಾಶ್ ಮೀನಾ ಎಂದು ಗುರುತಿಸಿದ್ದು ನೌಕಾ ಯಾರ್ಡ್ನಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡುತ್ತಿದ್ದ. ನೌಕಾ ಹಡಗುಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯ ನಡೆಯುವ ಸೂಕ್ಷ್ಮ ಪ್ರದೇಶಗಳನ್ನು ವಿಡಿಯೋ ಮಾಡಿದ್ದಾನೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಇನ್ಸ್ಟಾಗ್ರಾಂ ಖಾತೆ ಹಾಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ವಾಟ್ಸ್ಆ್ಯಪ್ ಸಂಖ್ಯೆಯ ಮೂಲಕ ಆರೋಪಿಗೆ ಪಾಕ್ ಕಡೆಯವರ ಪರಿಚಯವಾಗಿತ್ತು. ಬಳಿಕ ಅವರೊಂದಿಗೆ ಗ್ರೂಪ್ ಕಾಲ್ಗಳಲ್ಲಿ ಭಾಗವಹಿಸಿದ್ದಾನೆ ಎನ್ನುವ ಆರೋಪ ಇದೆ. ನೌಕಾನೆಲೆಗೆ ಆಗಮಿಸುವ ಯುದ್ಧನೌಕೆಗಳ ವಿವರಗಳನ್ನು ಪಡೆಯಲು ಕೆಲವರು ಹಡಗು ನಿರ್ವಹಣಾ ಕಂಪನಿಗಳ ಉದ್ಯೋಗಿಗಳಂತೆ ನಟಿಸಿ ಮಾಹಿತಿ ಪಡೆದಿರುವ ಅನುಮಾನ ವ್ಯಕ್ತವಾಗಿದೆ.
ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಧಿಕೃತ ರಹಸ್ಯಗಳ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳು ಯಾರು, ಯಾವುದೇ ಹಣಕಾಸಿನ ವಹಿವಾಟು ನಡೆದಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
25-11-26 07:48 pm
HK News Staffer
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ;...
25-11-26 02:11 pm
ಯೋಗಿಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ...
25-11-26 02:10 pm
ಹಾಸನ ಜಿಲ್ಲಾಧಿಕಾರಿ ಬಗ್ಗೆ ಲಂಚದ ಆರೋಪ ; ಕೇಂದ್ರ ಸಚ...
24-11-26 08:43 pm
ಬಿಸ್ಲೆರಿ ನೀರಿನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ;...
23-11-26 09:23 pm
25-11-26 11:53 am
HK News Staffer
Alwyn Joel Noronha, Mangalore: ಉದ್ಯಮಿ ಆಲ್ವಿನ್...
24-11-26 09:44 pm
ಮುಂಬೈ ನೌಕಾನೆಲೆಯಿಂದ ಮಾಹಿತಿ ಸೋರಿಕೆ ; 90 ರಹಸ್ಯ ವ...
24-11-26 08:45 pm
ಮಾಜಿ ಸಿಎಂ ಸ್ಟಾಲಿನ್ ಸೋಲಿಸಿದ್ದ ನಾಯಕನಿಗೆ ಭಾವಪೂರ್...
21-11-26 11:44 am
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
25-11-26 06:58 pm
HK News Staffer
ಸೌಜನ್ಯಾ ಪ್ರಕರಣ ಅತ್ಯಂತ ಸೂಕ್ಷ್ಮ ; ವೈಜ್ಞಾನಿಕ ಆಧಾ...
25-11-26 06:29 pm
ತಣ್ಣೀರುಬಾವಿ ಬೀಚ್ ನಲ್ಲಿ ದೇಶದ ಮೊದಲ ಡೇಟಾ ಸೆಂಟರ್...
25-11-26 05:49 pm
ಜಿಲ್ಲಾ ಕೇಂದ್ರಗಳಲ್ಲಿ ಡೇ ಕೇರ್ ಸೆಂಟರ್, ಎಲ್ಲ ಜಿಲ್...
24-11-26 06:46 pm
ಕದ್ರಿ ಯುದ್ಧ ಸ್ಮಾರಕದ ಬಳಿಯ ಯುದ್ಧ ಟ್ಯಾಂಕ್ ಮೇಲೆ ಹ...
24-11-26 10:51 am
25-11-26 01:30 pm
HK News Staffer
ಕಾಪು ಬೀಚ್ ನಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿದ ದಾವಣ...
23-11-26 02:24 pm
ತಲೆ ಕಡಿದು ಧ್ವನಿ ಅಡಗಿಸಬಹುದು, ನ್ಯಾಯದ ಧ್ವನಿಯನ್ನಲ...
23-11-26 11:59 am
ಸತ್ತಿದ್ದಾಳೆ ಎಂದ ಮಹಿಳೆ 7 ವರ್ಷಗಳ ಬಳಿಕ ಪ್ರತ್ಯಕ್ಷ...
21-11-26 04:41 pm
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm