ಬ್ರೇಕಿಂಗ್ ನ್ಯೂಸ್
31-07-20 11:49 am Headline Karnataka News Network ದೇಶ - ವಿದೇಶ
ನವದೆಹಲಿ(ಜು.30): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇಂದು ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ಸಂಸ್ಥೆಗಳ ಪ್ರಕಾರ, ರೊಟೀನ್ ಚೆಕ್-ಅಪ್ಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸೋನಿಯಾ ಅವರಿಗೆ ಕೆಲವು ತಪಾಸಣೆಗಳನ್ನು ಮಾಡಬೇಕಿದ್ದು, ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿಯೂ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗಲೂ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್ಗೂ ಸೋನಿಯಾ ಗಾಂಧಿ ಗೈರಾಗಿದ್ದರು.
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. 2017 ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ. ಡಿ.ಎಸ್. ರಾಣಾ ಅವರು ಆ ವೇಳೆ ತಪಾಸಣೆ ನಡೆಸಿ ಸೋನಿಯಾ ಅವರು ಅಸ್ತಮಾದಿಂದ ಬಳಲುತ್ತಿದ್ದಾರೆ ಎಂದಿದ್ದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm