ಬ್ರೇಕಿಂಗ್ ನ್ಯೂಸ್
19-01-21 03:47 pm Headline Karnataka News Network ದೇಶ - ವಿದೇಶ
ಸೂರತ್, ಜ.19 : ರಸ್ತೆ ಬದಿಯ ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್ನಲ್ಲಿ ನಡೆದಿದೆ.
ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದು ಸೋಮವಾರ ರಾತ್ರಿ ಸೂರತ್ ನಗರದಿಂದ 60 ಕಿಮೀ ದೂರದಲ್ಲಿರುವ ಕೋಸಂಬಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೂರತ್ - ಮಾಂಡವಿ ರಸ್ತೆಯ ಬದಿ ಫುಟ್ ಪಾತ್ ನಲ್ಲಿ ಕಾರ್ಮಿಕರು ಮಲಗಿದ್ದರು. ಟ್ರ್ಯಾಕ್ಟರ್ಗೆ ಡಿಕ್ಕಿಯಾದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರ್ಮಿಕರು ಮಲಗಿದ್ದ ಫುಟ್ಪಾತ್ ಮೇಲಿನಿಂದ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೈದು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಅತಿ ವೇಗದಿಂದ ಟ್ರಕ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಂಬನಿ ಮಿಡಿದಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಆದೇಶ ಮಾಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಕೂಡ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.
At least 15 people were killed after a truck ran over a total of 18 people sleeping on a footpath at Kim Char Rasta near Surat in Gujarat in the wee hours on Tuesday.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm