ಬ್ರೇಕಿಂಗ್ ನ್ಯೂಸ್
01-02-21 10:41 am Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ.01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ದಶಕದ ಮೊದಲ ಕೇಂದ್ರ ಬಜೆಟ್ ಮಂಡನೆಗೆ ರೆಡಿ ಆಗಿದ್ದಾರೆ. ನವದೆಹಲಿಯ ಸಂಸತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 9ನೇ ಬಜೆಟ್ ಮಂಡನೆ ಆಗಲಿದೆ.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ದೇಶದ ಆರ್ಥಿಕತೆಯು ಪಾತಾಳಕ್ಕೆ ಕುಸಿದಿದೆ. ಹಳಿ ತಪ್ಪಿರುವ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬಜೆಟ್ ಮಂಡಿಸುವ ನಿರೀಕ್ಷೆಗಳಿವೆ. ದೇಶದಲ್ಲಿ ಸಿದ್ಧಗೊಂಡಿರುವ ಕೊವಿಡ್-19 ಲಸಿಕೆಯು ಭಾರತದ ಪಾಲಿಗೆ ಒಂದು ಪ್ಲಸ್ ಪಾಯಿಂಟ್ ಆಗಿದೆ.
ದೇಶದ ಜನರಲ್ಲಿ ಆಸಕ್ತಿ ಮೂಡಿಸುವಂತಾ ಅಂಶಗಳೇನು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಬಜೆಟ್ ವಿಶೇಷತೆಗಳೇನು ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ಕೇಂದ್ರ ಬಜೆಟ್ ವಿಶೇಷತೆಗಳು:
1. ಕೇಂದ್ರ ಸಂಸತ್ ನಲ್ಲಿ ಮಾಜಿ ಕೇಂದ್ರ ಸಚಿವ ಮುರಾರ್ಜಿ ದೇಸಾಯಿ ಅವರು ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ್ದರು. ಮುರಾರ್ಜಿ ದೇಸಾಯಿ 10 ಬಾರಿ ಬಜೆಟ್ ಮಂಡಿಸಿದ್ದರೆ, ಮಾಜಿ ಸಚಿವ ಪಿ. ಚಿದಂಬರಂ ಅವರು 9 ಬಾರಿ ಕೇಂದ್ರ ಬಜೆಟ್ ಮಂಡನೆ ಮಾಡಿದ್ದರು.
2. BUDGET ಎಂಬ ಪದವು ಫ್ರೆಂಚ್ ಭಾಷೆಯಲ್ಲಿ ಸಣ್ಣ ಚೀಲ ಅಂದರೆ 'ಬೌಗೆಟ್' ನಿಂದ ಬಂದಿದೆ.
3. 1860 ರಲ್ಲಿ ಸ್ಕಾಟಿಷ್ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ ಜೇಮ್ಸ್ ವಿಲ್ಸನ್ ಅವರು ಮೊದಲ ಭಾರತೀಯ ಬಜೆಟ್ ಮಂಡಿಸಿದ್ದರು.
4. ಭಾರತದ ಮೊದಲ ಸ್ವತಂತ್ರ ಬಜೆಟ್ ಅನ್ನು ಆರ್.ಕೆ.ಶಣ್ಮುಖನ್ ಚೆಟ್ಟಿ ಅವರು ನವೆಂಬರ್ 26, 1947 ರಂದು ಮಂಡಿಸಿದ್ದರು.
5. ಕೇಂದ್ರ ಬಜೆಟ್ ಮತ್ತು ರೈಲ್ವೆ ಬಜೆಟ್ ನ್ನು 2017ರವರೆಗೂ ಪ್ರತ್ಯೇಕವಾಗಿ ಮಂಡಿಸಲಾಗುತ್ತಿದ್ದು, ನಂತರದಲ್ಲಿ ವಿಲೀನಗೊಳಿಸಲಾಯಿತು.
6. 2000ನೇ ವರ್ಷದವರೆಗೂ ಫೆಬ್ರವರಿ ಕೊನೆಯ ದಿನದಂದು ಸಂಜೆ 5 ಗಂಟೆಗೆ ಕೇಂದ್ರ ಬಜೆಟ್ ಮಂಡಿಸಲಾಗುತ್ತಿತ್ತು. ಆದರೆ 2001ರಲ್ಲಿ ಅಂದಿನ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಇದನ್ನು ಬೆಳಿಗ್ಗೆ 11ಕ್ಕೆ ಬದಲಾಯಿಸಿದ್ದರು.
7. 2014ರಲ್ಲಿ ಅಂದಿನ ಕೇಂದ್ರ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಸುದೀರ್ಘ ಎಂದ 2 ಗಂಟೆ 50 ನಿಮಿಷಗಳವರೆಗೂ ಬಜೆಟ್ ಮಂಡಿಸಿದ್ದರು.
8. 1955 ರವರೆಗೆ, ಕೇಂದ್ರ ಬಜೆಟ್ ಅನ್ನು ಇಂಗ್ಲಿಷ್ ನಲ್ಲಿ ಮಾತ್ರ ಮಂಡಿಸಲಾಗುತ್ತಿತ್ತು. ಆ ವರ್ಷದ ನಂತರ, ಕಾಂಗ್ರೆಸ್ ನೇತೃತ್ವದ ಸರ್ಕಾರ ಬಜೆಟ್ ಪತ್ರಿಕೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮುದ್ರಿಸಲು ನಿರ್ಧರಿಸಿತು.
9. 2019ರಲ್ಲಿ, ಕೇಂದ್ರ ಹಣಕಾಸು ಸಚಿವೆ ಸೀತಾರಾಮನ್ ಅವರು ಸಾಂಪ್ರದಾಯಿಕ ಬಜೆಟ್ ಬ್ರೀಫ್ಕೇಸ್ ಬದಲಿಗೆ ರಿಬ್ಬನ್ ನಿಂದ ಸುತ್ತಿದ ರಾಷ್ಟ್ರೀಯ ಲಾಂಛನದೊಂದಿಗೆ ಕೆಂಪು ಪ್ಯಾಕೆಟ್ ಅನ್ನು ತೆಗೆದುಕೊಂಡು ಹೋಗುವುದನ್ನು ಆರಂಭಿಸಿದರು.
10. 1970ರಲ್ಲಿ ಇಂದಿರಾ ಗಾಂಧಿಯವರು ಹಣಕಾಸು ಸಚಿವರಾಗಿ ಕೇಂದ್ರ ಬಜೆಟ್ ಮಂಡಿಸಿದ ಮೊದಲ ಮಹಿಳೆ ಎನಿಸಿದ್ದಾರೆ.
What is Budget, why is it named budget all that you need to know about budget 2021.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm