ಬ್ರೇಕಿಂಗ್ ನ್ಯೂಸ್
05-02-21 12:27 pm Headline Karnataka News Network ದೇಶ - ವಿದೇಶ
ಅಮರಾವತಿ, ಫೆಬ್ರವರಿ 5: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಗುರುವಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸಂತ್ರಸ್ತರ ಕುಟುಂಬದವರಿಗೆ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಿರಿಕುಳಕ್ಕೆ ಒಳಗಾದ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ ಎಂದಿರುವ ಜಗನ್, ಈ ಸಮುದಾಯಗಳ ಸಂತ್ರಸ್ತರಿಗೆ ಭೂಮಿ ಮಂಜೂರು ಮಾಡುವ ಕ್ರಮ ಕೂಡ ತೆಗೆದುಕೊಳ್ಳಬೇಕು. ಭೂಮಿ ಲಭ್ಯವಾಗದ ಸಂದರ್ಭಗಳಲ್ಲಿ ಅದಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸಂತ್ರಸ್ತರಗೆ ಹಂಚಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಉನ್ನತ ಮಟ್ಟದ ಎಸ್ಸಿ ಮತ್ತು ಎಸ್ಟಿ ನಿಗಾ ಹಾಗೂ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿರುವ ಜಗನ್, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೇಲಿನ ದೌರ್ಜನ್ಯಗಳ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದರು. 2013ರಿಂದಲೂ ಈ ಸಮಿತಿ ಸಭೆಗಳು ನಡೆದಿರಲಿಲ್ಲ. ಹಿಂದಿನ ಸರ್ಕಾರವು ಕಾನೂನು ಜಾರಿಯಲ್ಲಿ, ಅದರಲ್ಲಿಯೂ ಎಸ್ಸಿ ಮತ್ತು ಎಸ್ಟಿಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಗಮನ ಹರಿಸಿರಲಿಲ್ಲ ಎಂದು ಜಗನ್ ಆರೋಪಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾನೂನು ಜಾರಿಯ ನಿರಂತರ ಪರಾಮರ್ಶನ ನಡೆಯಲಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ಎರಡೂ ಕಡೆ ಈ ಸಭೆಗಳು ನಡೆಯಬೇಕು ಎಂದು ನಿರ್ದೇಶಿಸಿದ್ದಾರೆ. ಎಸ್ಸಿ ಮತ್ತು ಎಸ್ಟಿ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
Andhra Pradesh Chief Minister YS Jagan Mohan Reddy on Thursday directed officials to provide jobs to the family members of rape and murder victims from the Scheduled Caste and Scheduled Tribe (SC and ST) communities. Jagan said the state
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm