ಬ್ರೇಕಿಂಗ್ ನ್ಯೂಸ್
07-02-21 02:49 pm Headline Karnataka News Network ದೇಶ - ವಿದೇಶ
ಚಮೋಲಿ; ಫೆಬ್ರವರಿ 7: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದು ಪ್ರವಾಹ ಉಂಟಾಗಿದ್ದು, 150 ಮಂದಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದ್ದು, ಚಮೋಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಜೋಶಿಮಠದ ಧೌಲಿ ಗಂಗಾ ಕಣಿವೆಯಲ್ಲಿ ಹಿಮನದಿ ಒಡೆದ ಪರಿಣಾಮ ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಯೋಜನೆಯ ಡ್ಯಾಮ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ನಾಪತ್ತೆಯಾಗಿದ್ದು, ಅವರೆಲ್ಲಾ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತವಾಗಿದೆ.
ಇಂಡೋ - ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಈ ಸಂಬಂಧ ತುರ್ತು ಸಭೆ ಕರೆದಿದ್ದಾರೆ.
ಭೀಕರ ಪ್ರವಾಹದಿಂದ ಹೈ ಅಲರ್ಟ್ ಘೋಷಣೆ:
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದಿದ್ದು, ಸುತ್ತಲಿನ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಿಮನದಿ ಒಡೆದ ಕಾರಣ ದೌಲಿಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಹೀಗಾಗಿ ಪ್ರವಾಹ ಉಂಟಾಗಿದ್ದು, ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಜೋಶಿಮಠದಲ್ಲಿ ನಡೆಯುತ್ತಿರುವ ರೈಲ್ವೆ ನಿರ್ಮಾಣ ಕಾಮಗಾರಿ ಸೇರಿದಂತೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ. ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರ ಹಾಗೂ ಗಂಗಾ ತೀರಕ್ಕೆ ಹೋಗದಂತೆ ಜನರಿಗೆ ಚಮೋಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗುವ ಸಾಧ್ಯತೆ ಹೆಚ್ಚಿದ್ದು, ಅಣೆಕಟ್ಟು ಬಳಿ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳ ತಂಡವು ಬೀಡುಬಿಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಡಿಆರ್ಎಫ್ ತಂಡ ಕೂಡ ಗ್ರಾಮಕ್ಕೆ ಆಗಮಿಸಿದೆ.
At least 150 workers are feared missing after a portion of Nanda Devi glacier broke off in Tapovan area of Joshimath in Uttarakhand’s Chamoli district on Sunday morning and damaged the Rishiganga dam on Alaknanda river.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm