ಬ್ರೇಕಿಂಗ್ ನ್ಯೂಸ್
16-02-21 01:14 pm Headline Karnataka News Network ದೇಶ - ವಿದೇಶ
ಮುಂಬೈ, ಫೆ.16: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಮುಂಬೈನಲ್ಲಿರುವ ಮನೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ದಿಢೀರ್ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಅಕ್ಸಾ ಬೀಚ್ ಬಳಿಯಿರುವ ಮಿಥುನ್ ಚಕ್ರವರ್ತಿಯವರ ಬಂಗಲೆಗೆ ಮೋಹನ್ ಭಾಗವತ್ ಭೇಟಿ ನೀಡಿದ್ದು, ಖಾಸಗಿಯಾಗಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.
ಮಿಥುನ್ ಚಕ್ರವರ್ತಿ ಮೂಲತಃ ಬೆಂಗಾಲಿ ನಟನಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಮಿಥುನ್ ಅವರನ್ನು ಬಿಜೆಪಿಗೆ ಸೆಳೆಯುವ ನಿಟ್ಟಿನಲ್ಲಿ ಅಥವಾ ಬಿಜೆಪಿ ಪರ ಪ್ರಚಾರಕ್ಕೆ ಕರೆತರುವ ಭಾಗವಾಗಿ ಮೋಹನ್ ಭಾಗ್ವತ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಿಥುನ್ ಚಕ್ರವರ್ತಿ ಈ ರೀತಿಯ ವದಂತಿಯನ್ನು ಅಲ್ಲಗಳೆದಿದ್ದಾರೆ. ನನಗೂ, ಮೋಹನ್ ಭಾಗ್ವತ್ ಅವರಿಗೂ ಆಧ್ಯಾತ್ಮಿಕ ಸಂಬಂಧ ಇದೆ. ಹೀಗಾಗಿ ಕಳೆದ ಬಾರಿ ನಾಗಪುರದಲ್ಲಿ ಅವರನ್ನು ಭೇಟಿಯಾಗಿದ್ದೆ. ನಾನು ಮುಂಬೈನಲ್ಲಿದ್ದಾಗ ಮನೆಗೆ ಬರುವಂತೆ ಆಹ್ವಾನ ನೀಡಿದ್ದೆ. ಹಾಗಾಗಿ ಬಂದಿದ್ದಾರೆ. ರಾಜಕೀಯ ಮಾತುಕತೆಗಳೇನು ನಡೆದಿಲ್ಲ ಎಂದು ಹೇಳಿದ್ದಾರೆ.
ಮಿಥುನ್ ಚಕ್ರವರ್ತಿ ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದು ಬಹುಕಾಲದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯರೂ ಆಗಿದ್ದರು. ಕಳೆದ 2016ರಲ್ಲಿ ಆರೋಗ್ಯ ಸಂಬಂಧೀ ಸಮಸ್ಯೆಗಳಿಂದಾಗಿ ಮಿಥುನ್, ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
RSS chief Mohan Bhagwat visited actor Mithun Chakraborty at his Mumbai residence on Tuesday. Mohan Bhagwat was at Mithun's bungalow in Madh area of Mumbai early morning.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm