ಬ್ರೇಕಿಂಗ್ ನ್ಯೂಸ್
18-02-21 11:19 am Headline Karnataka News Network ದೇಶ - ವಿದೇಶ
ಲಕ್ನೋ, ಫೆಬ್ರವರಿ 18: ಉತ್ತರಪ್ರದೇಶದ ಪೊಲೀಸರು ಮಹಿಳೆಯರ ಸುರಕ್ಷತೆಗಾಗಿ ಹೊಸದೊಂದು ತಂತ್ರ ರೂಪಿಸಿದ್ದಾರೆ. ಆನ್ ಲೈನ್ ನಲ್ಲಿ ಪೋರ್ನ್ ವಿಡಿಯೋ ವೀಕ್ಷಿಸುವ ಜನರ ಮೇಲೆ ಹದ್ದಿನ ಕಣ್ಣಿಡಲು ನಿರ್ಧರಿಸಿದ್ದಾರೆ.
ಹೌದು, ಆನ್ ಲೈನ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುವವರ ಮೇಲೆ ನಿಗಾವಹಿಸಲು ಯುಪಿ ಪೊಲೀಸರು ಪ್ರತ್ಯೇಕ ತಂಡವೊಂದನ್ನು ರಚಿಸಿದ್ದಾರೆ. ಜಾಲತಾಣಗಳಲ್ಲಿ ಯಾರ್ಯಾರು ಅಶ್ಲೀಲ ವಿಷಯಗಳನ್ನು ಹುಡುಕುತ್ತಾರೋ ಅಂತಹವರ ಸರ್ಚ್ ಹಿಸ್ಟರಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದಂತಹ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ‘ಯುಪಿ ವುಮೆನ್ ಪವರ್ಲೈನ್ 1090’ ಎಂಬ ಹೊಸ ತಂಡ ರೂಪಿಸಿದ್ದು, ಯಾವುದೇ ಒಬ್ಬ ವ್ಯಕ್ತಿ ಅಂತರ್ಜಾಲದಲ್ಲಿ ಅಶ್ಲೀಲ ವಿಷಯಗಳನ್ನು ಹುಡುಕಿದ ತಕ್ಷಣ ಅದನ್ನು ಪತ್ತೆಹಚ್ಚಿ ತಿಳಿಸುವ ಜವಾಬ್ದಾರಿಯನ್ನು ಈ ತಂಡಕ್ಕೆ ನೀಡಲಾಗಿದೆ.
ಅಂತರ್ಜಾಲದ ವಿಶ್ಲೇಷಣೆಯ ಬಗ್ಗೆ ಅಧ್ಯಯನ ಮಾಡಲು ಯುಪಿ ಪೊಲೀಸರು "Oomuph'' ಎಂಬ ಕಂಪನಿಯನ್ನು ನೇಮಿಸಿಕೊಂಡಿದ್ದಾರೆ. ಡೇಟಾದ ಮೂಲಕ ಅಂತರ್ಜಾಲದಲ್ಲಿ ಏನನ್ನು ಹುಡುಕಲಾಗುತ್ತಿದೆ ಎಂಬುದರ ಮೇಲೆ ನಿಗಾ ಇಡುವ ಕಾರ್ಯವನ್ನು ಈ ಕಂಪನಿಗೆ ವಹಿಸಲಾಗಿದೆ. ಒಬ್ಬ ವ್ಯಕ್ತಿಯು ಅಶ್ಲೀಲ ಚಿತ್ರಗಳನ್ನು ನೋಡಿದ ತಕ್ಷಣವೇ ವಿಶ್ಲೇಷಣಾ ತಂಡವು ಅದರ ಬಗ್ಗೆ ಮಾಹಿತಿಯನ್ನು ಪಡೆಯುತ್ತದೆ. ಬಳಿಕ ಅಶ್ಲೀಲ ಚಿತ್ರಗಳನ್ನು ಹುಡುಕುವವರು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸುತ್ತಾರೆ ಮತ್ತು ಈ ಮಾಹಿತಿಯನ್ನು ಪೊಲೀಸರು ಕೂಡ ಪಡೆದುಕೊಳ್ಳುತ್ತಾರೆ. ಮಹಿಳೆಯರ ಸುರಕ್ಷತೆಯ ಕಡೆಗೆ ಯುಪಿ ಪೊಲೀಸರು ನಡೆಸುತ್ತಿರುವ ಈ ಕಾರ್ಯ ಶ್ಲಾಘನೀಯವಾದರೂ, ಇದು ಎರಡು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.
ಇದು ಭಾರತದಲ್ಲಿ ಅನೇಕರಿಗೆ ಆಶ್ಚರ್ಯವಾಗಬಹುದು. ಅನೇಕ ಮಹಿಳೆಯರು ಕೂಡ ಆನ್ ಲೈನ್ ನಲ್ಲಿ ಪೋರ್ನ್ ವಿಡಿಯೋ ವೀಕ್ಷಿಸುತ್ತಾರೆ. 2017 ರಲ್ಲಿ ಪೋರ್ನ್ ವೆಬ್ಸೈಟ್ ಪೋರ್ನ್ಹಬ್ ನೀಡಿರುವ ಮಾಹಿತಿ ಪ್ರಕಾರ ಆನ್ ಲೈನ್ ನಲ್ಲಿ ಪೋರ್ನ್ ವೀಕ್ಷಿಸುವರ ಸಂಖ್ಯೆಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ವೀಕ್ಷಿಸುತ್ತಾರೆಂಬ ವಿಷಯವನ್ನು ಬಹಿರಂಗಪಡಿಸಿದೆ.
10ನೇ ಕ್ಲಾಸಿನ ವಿದ್ಯಾರ್ಥಿನಿಯ ಮೇಲೆ ನಾಲ್ವರು ಬಾಲಕರು ಅತ್ಯಾಚಾರ ಎಸಗಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ 2018ರಲ್ಲಿ ಭಾರತದಲ್ಲಿ ಪೋರ್ನ್ ವೆಬ್ಸೈಟ್ಗಳನ್ನು ನಿಷೇಧಿಸುವಂತೆ ಉತ್ತರಾಖಂಡ ಹೈಕೋರ್ಟ್ ಕೇಂದ್ರಕ್ಕೆ ಮನವಿ ಮಾಡಿದೆ. ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗುವ ಮುನ್ನ ಬಾಲಕರು ಅಶ್ಲೀಲ ವಿಡಿಯೋಗಳನ್ನು ನೋಡಿದ್ದರೆಂದು ನಂತರ ತಿಳಿದುಬಂದಿತ್ತು. ಈ ಆದೇಶವನ್ನು ಅನುಸರಿಸಿ 827 ಪೋರ್ನ್ ವೆಬ್ಸೈಟ್ಗಳನ್ನು ನಿಷೇಧಿಸುವಂತೆ ಕೇಂದ್ರವು ಐಎಸ್ಪಿಗಳಿಗೆ ನಿರ್ದೇಶನ ನೀಡಿತ್ತು.
The Uttar Pradesh Police on Saturday said it has hired a company to "keep an eye" on people's internet search data to monitor those looking up pornographic content.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm