ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm