ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm