ಬ್ರೇಕಿಂಗ್ ನ್ಯೂಸ್
08-04-21 09:09 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 08: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು 2 ರಿಂದ 3 ವಾರ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಹಲವು ರಾಜ್ಯದ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ದೇಶದಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾಗಿಯೂ ಆತಂಕಕಾರಿ ವಿಷಯವಾಗಿದೆ ಎಂದರು.
ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಮೊದಲನೇ ಅಲೆ ಮುಕ್ತಾಯವಾಗಿದೆ. ಮೊದಲು ಕೊವಿಡ್-19 ಸೋಂಕನ್ನು ಎದುರಿಸಿದ ಅನುಭವವನ್ನು ಈ ಬಾರಿ ಸಮರ್ಥವಾಗಿ ಬಳಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತದಲ್ಲಿ ಲಾಕ್ಡೌನ್ ಜಾರಿಗೊಳಿಸಲು ಪರಿಸ್ಥಿತಿ ಮೊದಲಿನಂತಿಲ್ಲ;
ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಯು ಮೊದಲಿಗಿಂತ ಹೆಚ್ಚಾಗಿದೆ. ಭಾರತದಲ್ಲಿನ ವೈದ್ಯಕೀಯ ಸೌಲಭ್ಯಗಳು ಮೊದಲಿಗಿಂತಲೂ ಉತ್ತಮವಾಗಿದೆ. ನಮ್ಮಲ್ಲಿ ಇದೀಗ ಪಿಪಿಇ ಕಿಟ್ ಇದೆ, ಕೊವಿಡ್-19 ಲಸಿಕೆಯೂ ಇದೆ. ಹೀಗಿರುವಾಗ ಕೊರೊನಾವೈರಸ್ ಸೋಂಕಿಗೆ ಭಯಪಡುವ ಅಗತ್ಯವಿಲ್ಲ. ಆದರೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲೇಬೇಕು. ಕೊರೊನಾವೈರಸ್ ಸೋಂಕಿನ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಪ್ರಧಾನಿ ಮೋದಿ ಕರೆ ನೀಡಿದರು.
ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿರಿ;
ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ಕೊವಿಡ್-19 ಸೋಂಕಿನ ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ. ಹಾಗಿದ್ದರೂ, ದೇಶದ ಶೇ.70ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.
ಏಪ್ರಿಲ್ 11-14 ರವರೆಗೆ 4 ದಿನಗಳ ಕಾಲ ದೇಶದಾದ್ಯಂತ ವ್ಯಾಕ್ಸಿನ್ ಉತ್ಸವ- ಪ್ರಧಾನಿ ಮೋದಿ;
ಕೊರೊನಾವೈರಸ್ ಲಸಿಕೆ ಬಗ್ಗೆ ದೇಶಾದ್ಯಂತ ಜಾಗೃತಿ ಮೂಡಿಸಬೇಕಿದೆ. ಏಪ್ರಿಲ್ 11 ರಿಂದ ಏಪ್ರಿಲ್ 14ರವರೆಗೂ ಲಸಿಕೆ ಉತ್ಸವವನ್ನು ನಡೆಸಲಾಗುತ್ತದೆ. ನಾಲ್ಕು ದಿನಗಳಲ್ಲಿ ಅತಿಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಬೇಕಿದೆ. 45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆದುಕೊಳ್ಳಬೇಕು. ಆ ಮೂಲಕ ಲಸಿಕೆಯು ವ್ಯರ್ಥವಾಗುವುದನ್ನು ತಡೆಯೋಣ ಎಂದು ಪ್ರಧಾನಿ ಮೋದಿ ಮನವಿ ಮಾಡಿಕೊಂಡಿದ್ದಾರೆ.
Prime Minister Narendra Modi on Thursday said that there is a need to impose micro-containment zones in areas where Covid-19 cases are rising, as he held a meeting with chief ministers to take stock of the situation in the country and ongoing vaccination programme.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm