ಬ್ರೇಕಿಂಗ್ ನ್ಯೂಸ್
27-04-21 12:57 pm Headline Karnataka News Network ದೇಶ - ವಿದೇಶ
Photo credits : newindianexpress
ನವದೆಹಲಿ : ಭೂಗತ ಪಾತಕಿ ಛೋಟಾ ರಾಜನ್ ಗೆ ಕೋವಿಡ್ ಸೋಂಕು ತಗುಲಿದ್ದು ಸದ್ಯ ಅವರನ್ನು ತಿಹಾರ್ ಜೈಲಿನಿಂದ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗಿದೆ.
ಸದ್ಯ ಛೋಟಾ ರಜನ್ ತಿಹಾರ್ ಜೈಲಿನದ್ದ. ಈ ವೇಳೆ ಕೋವಿಡ್ ಸೋಂಕು ತಗುಲಿದೆ. ನಂತರ ಅವರನ್ನು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ತಿಳಿಸಿದೆ. ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ನೀಡಲು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
61 ವರ್ಷದ ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜನ್ ಅವರನ್ನು ಹಾಜರುಪಡಿಸಲು ಸಾಧ್ಯವಿಲ್ಲ. ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಸೋಮವಾರ, ತಿಹಾರ್ ಜೈಲಿನ ಸಹಾಯಕ ಜೈಲರ್ ದೂರವಾಣಿ ಮೂಲಕ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಛೋಟಾ ರಾಜನ್ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ.
2015 ರಲ್ಲಿ ನಂದು ವಾಜೆಕರ್ ಎಂಬ ಬಿಲ್ಡರ್ ಪುಣೆಯಲ್ಲಿ ಜಮೀನು ಖರೀದಿಸಿದ್ದು, ಪರಮಾನಂದ ಠಕ್ಕರ್ ಎಂಬ ಏಜೆಂಟನಿಗೆ 2 ಕೋಟಿ ಕೊಡಬೇಕಾಗಿತ್ತು. ಈ ವಿಚಾರವಾಗಿ ಪರಮಾನಂದ ಠಕ್ಕರ್ ಹೆಚ್ಚಿನ ಹಣವನ್ನು ಬೇಡಿಕೆಯಿಟ್ಟಿದ್ದ.
ಈ ಬೇಡಿಕೆಗೆ ವಾಜೇಕರ್ ಒಪ್ಪಿರಲಿಲ್ಲ. ನಂತರ ಪರಮಾನಂದ ಠಕ್ಕರ್ ಛೋಟಾ ರಾಜನ್ ನನ್ನು ಸಂಪರ್ಕಿಸಿ ಡೀಲ್ ಮಾಡುವಂತೆ ಹೇಳಿದ್ದನು. ನಂತರ ಛೋಟಾ ರಾಜನ್ ಬಿಲ್ಡರ್ ನಂದು ವಾಜೆಕರ್ಗೆ 26 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದು, ಇದಕ್ಕೆ ಒಪ್ಪದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಛೋಟಾ ರಾಜನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
Underworld don Rajendra Nikalje alias Chhota Rajan has tested positive for Covid-19 and admitted to the New Delhi-based All India Institute of Medical Services (AIIMS), Tihar jail authorities informed a sessions court here on Monday.
31-03-25 07:41 pm
Bangalore Correspondent
Yatnal, Lakshmi Hebbalkar, Controversy: ಯತ್ನಾ...
31-03-25 12:24 pm
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
31-03-25 09:29 pm
Mangalore Correspondent
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm