ಬ್ರೇಕಿಂಗ್ ನ್ಯೂಸ್
26-08-20 11:56 am Headline Karnataka News Network ದೇಶ - ವಿದೇಶ
ಬೆಂಗಳೂರು (ಆ. 26): ಐಸಿಸ್ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಬೆಂಗಳೂರಿನ ವೈದ್ಯ ಡಾ. ಅಬ್ದುರ್ ರೆಹಮಾನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಸ್ನೇಹಿತರನ್ನು ಎನ್ಐಎ ವಶಕ್ಕೆ ಪಡೆದಿದೆ. ವಶಕ್ಕೆ ಪಡೆದು, ಕಳೆದ ನಾಲ್ಕು ದಿನಗಳಿಂದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಅಬ್ದುರ್ ರೆಹಮಾನ್ ಸ್ನೇಹಿತರನ್ನು ಎನ್ಐಎ ಮತ್ತು ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ವೈದ್ಯ ಅಬ್ದುರ್ ರೆಹಮಾನ್ ಜೊತೆಗೂಡಿ ಹಲವು ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಅನುಮಾನದಿಂದ ಅಬ್ದುರ್ ರೆಹಮಾನ್ ಸ್ನೇಹಿತರ ಪಾತ್ರದ ಬಗ್ಗೆ ಸಾಕ್ಷ್ಯ ಸಂಗ್ರಹಕ್ಕೆ ಎನ್ಐಎ ಅಧಿಕಾರಿಗಳು ಮುಂದಾಗಿದ್ದಾರೆ.
ಬಸವನಗುಡಿಯ ಎಂಡಿ ಬ್ಲಾಕ್ ನಿವಾಸಿ ಅಬ್ದುರ್ ರೆಹಮಾನ್ ಎಂಬಾತನನ್ನು ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದಲ್ಲಿ ಇತ್ತೀಚೆಗೆ ಬಂಧಿಸಲಾಗಿತ್ತು. ಬಸವನಗುಡಿಯಲ್ಲಿ ಆತ ನೆಲೆಸಿದ್ದ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ ದೆಹಲಿ ಎನ್ಐಎ ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿ ಆತನನ್ನು ಬಂಧಿಸಿದ್ದರು. ಬಂಧಿತ ಶಂಕಿತ ಉಗ್ರ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಆಪ್ತೋಲ್ಮಾಲಜಿಸ್ಟ್ ನಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚೆಗೆ ಮೆರಿಟ್ ನಲ್ಲಿ ಉತ್ತೀರ್ಣನಾಗಿದ್ದ. ಆದರೆ, ಆರೋಪಿ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಕೊರೋಸನ್ ಪ್ರೋವಿನ್ಸ್ (ISKP) ಎಂಬ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ಬಾಂಗ್ಲಾದೇಶ ಮೂಲದ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಕೊರೋಸನ್ ಪ್ರೋವಿನ್ಸ್ ಸಂಘಟನೆಯ ಸದಸ್ಯನಾಗಿದ್ದ ಈತ ತಿಹಾರ್ ಜೈಲಿನಲ್ಲಿ ಅಬ್ದುಲ್ ಬಸೀತ್ ಎಂಬ ಉಗ್ರ ಹಾಗೂ ಪೂನಾ ಮೂಲದ ಸಾದಿಯಾ ಅನ್ವರ್, ನಬೀಲ್ ಸಿದ್ದಿಕಿ ಖತ್ರಿ ಜೊತೆ ಸಂಪರ್ಕ ಹೊಂದಿದ್ದ. ಈ ಮೂವರು ಶಂಕಿತರು ಐಸಿಸ್ ನಂಟು ಹೊಂದಿದ್ದು ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಭಾರತ ಮತ್ತು ಇತರ ದೇಶಗಳಲ್ಲಿ ಸಿಎಎ ಪ್ರತಿಭಟನೆ ವೇಳೆ ಗಲಭೆ ಸಂಚು ರೂಪಿಸಿ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾಗಿ ಅಬ್ದುರ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದ. 2014ರಲ್ಲಿ ಸಿರಿಯಾದ ಐಸಿಸ್ ಕ್ಯಾಂಪ್ ಗೆ ಭೇಟಿ ಕೊಟ್ಟಿದ್ದ ಈತ 10 ದಿನಗಳ ಕಾಲ ಸಿರಿಯಾದ ಐಸಿಸ್ ಕ್ಯಾಂಪ್ ನಲ್ಲಿ ಉಳಿದಿದ್ದ. ಈ ವೇಳೆ ಐಸಿಸ್ ಕ್ಯಾಂಪ್ ನಲ್ಲಿ ಗಾಯಗೊಂಡ ಉಗ್ರರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದ್ದ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm