ಬ್ರೇಕಿಂಗ್ ನ್ಯೂಸ್
12-05-21 01:53 pm Headline Karnataka News Network ದೇಶ - ವಿದೇಶ
Photo credits : newsyolo
ಜೆರುಸಲೇಂ,,ಮೇ 12: ಪ್ಯಾಲೇಸ್ತೀನ್ದಲ್ಲಿನ ಗಾಜಾ ಮೂಲದ ಭಯೋತ್ಪಾದಕ ಸಂಘಟನೆಯು ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಭಾರತೀಯ ಮಹಿಳೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್, ದಕ್ಷಿಣ ಇಸ್ರೇಲ್ನ ಕರಾವಳಿ ನಗರವಾದ ಅಶ್ಕೆಲೋನ್ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು.
ಗಾಜಾ ಮೂಲದ ಉಗ್ರರು ಸೋಮವಾರ ಸಂಜೆಯಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್ ದಾಳಿ ನಡೆಸಿದ್ದು, ಮಂಗಳವಾರ ರಾತ್ರಿ 9 ಗಂಟೆಯ ವರೆಗೆ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಇದಕ್ಕೆ ಪ್ರತಿಯಾಗಿ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದಿ ಉಗ್ರರ ನೆಲೆ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಬ್-ಯಹೂದಿ ದೇಶಗಳಲ್ಲಿ ಭಾರಿ ಹಿಂಸಾಚಾರ ಹಾಗೂ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲಾಡ್ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.
ಭಾರತೀಯ ಮೂಲದ ಮಹಿಳೆ ಕಳೆದ ಏಳು ವರ್ಷಗಳಿಂದ ಇಸ್ರೇಲ್ನಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಕೇರಳದಲ್ಲಿರುವ ಪತಿ ಹಾಗೂ ಏಳು ವರ್ಷದ ಮಗನನ್ನು ಅಗಲಿದ್ದಾರೆ.
ಉಗ್ರರು ನಡೆಸಿದ ರಾಕೆಟ್ ದಾಳಿಯು ನೇರವಾಗಿ ವೃದ್ಧೆಯ ಮನೆಗೆ ಅಪ್ಪಳಿಸಿತ್ತು. ಈ ವೇಳೆ 80 ವರ್ಷದ ವೃದ್ಧೆಯ ಆರೈಕೆ ಮಾಡುತ್ತಿದ್ದ ಕೇರಳ ಮೂಲದ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸಿದೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಭವಿಸಿದಾಗ ಸೌಮ್ಯ ತನ್ನ ಪತಿ ಸಂತೋಷ್ ಅವರೊಂದಿಗೆ ವಿಡಿಯೊ ಕರೆ ಮೂಲಕ ಮಾತನಾಡುತ್ತಿದ್ದರು ಎಂದು ಕೇರಳದಲ್ಲಿರುವ ಕುಟುಂಬ ಮೂಲಗಳು ತಿಳಿಸಿವೆ.
ಕೇರಳದ ಪಾಲಾ ಕ್ಷೇತ್ರದ ಶಾಸಕ ಮಾಣಿ ಸಿ ಕಾಪ್ಪನ್, ಘಟನೆಯನ್ನು ಖಂಡಿಸಿದ್ದು, ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಮಲಯಾಳಿಗರ ರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತುರ್ತಾಗಿ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.
ಅತ್ತ ಭಾರತದ ಇಸ್ರೇಲ್ ರಾಯಭಾರಿ ರಾನ್ ಮಲ್ಕಾ, ಮಹಿಳೆಯ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ.
A Kerala woman working in Israel was killed allegedly in a Palestinian rocket strike on Tuesday, her family members said. They said the rocket fell on the residence of 31-year old Soumya in the city of Ashkelon while she was talking to her husband Santhosh, who is in Kerala, over a video call in the evening.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
03-04-25 01:02 pm
HK News Desk
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm