ಬ್ರೇಕಿಂಗ್ ನ್ಯೂಸ್
27-08-20 09:47 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೊರೋನಾ ವೈರಸ್ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಎಸ್ಟಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬಿದ್ದಿದ್ದು, ರಾಜ್ಯಗಳಿಗೆ ಹೆಚ್ಚಿನ ಜಿಎಸ್ಟಿ ಪರಿಹಾರ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತಿಳಿಸಿದ್ದಾರೆ. ಇಂದು ಆನ್ಲೈನ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 41ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.
2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ 1.65 ಲಕ್ಷ ಕೋಟಿಗೂ ಹೆಚ್ಚು ಜಿಎಸ್ಟಿ ಪರಿಹಾರ ಹಣ ನೀಡಲಾಗಿದೆ. 97 ಸಾವಿರ ಕೋಟಿ ರೂ ಪರಿಹಾರ ಹಣದ ಕೊರತೆ ಬೀಳುವ ಅಂದಾಜು ಇದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಕೇಂದ್ರ ಸರ್ಕಾರದ ಪ್ರಕಾರ ಈ ವರ್ಷ ಜಿಎಸ್ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳುತ್ತಿದೆ. ಜಿಎಸ್ಟಿ ಸಂಗ್ರಹದಲ್ಲಿ ವ್ಯತ್ಯವಾದರೆ ಸರ್ಕಾರವೇ ಭರ್ತಿ ಮಾಡಬೇಕೆಂದು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಈ ಸಂದರ್ಭದಲ್ಲಿ ಒತ್ತಾಯಿಸಿದವು. ಆದರೆ, ಬಿಕ್ಕಟ್ಟಿನಿಂದ ಜಿಎಸ್ಟಿ ಸಂಗ್ರಹಕ್ಕೆ ಧಕ್ಕೆಯಾಗಿದ್ದರೆ ರಾಜ್ಯಗಳಿಗೆ ಪೂರ್ಣ ಜಿಎಸ್ಟಿ ಪಾಲು ಕೊಡಬೇಕೆಂಬ ನಿಯಮ ಇಲ್ಲವೆಂದು ಕೇಂದ್ರ ಸರ್ಕಾರ ಕಾನೂನು ಉಲ್ಲೇಖಿಸಿ ಸಭೆಯಲ್ಲಿ ಸ್ಪಷ್ಟಪಡಿಸಿತು.
ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಈ ಜಿಎಸ್ಟಿ ಸಭೆಯಲ್ಲಿ ಆದಾಯ ಕೊರತೆ ನೀಗಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು. ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದ್ದರೆ ರಾಜ್ಯ ಸರ್ಕಾರಗಳು ಹಣವನ್ನು ಸಾಲವಾಗಿ ಪಡೆಯಬಹುದು, ಸೆಸ್ ಮೊದಲಾದ ತೆರಿಗೆ ದರ ಏರಿಸಿ ಆದಾಯ ಮಾಡಬಹುದು ಎಂಬಿತ್ಯಾದಿ ಸಲಹೆಗಳು ಕೆಲ ರಾಜ್ಯಗಳಿಂದ ವ್ಯಕ್ತವಾದವು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm