ಬ್ರೇಕಿಂಗ್ ನ್ಯೂಸ್
29-05-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಮೇ 29: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ನಡುವೆ ಲಸಿಕೆ ವಿತರಣೆ ಪ್ರಮಾಣದಲ್ಲಿ ಕ್ರಮೇಣ ಏರಿಕೆ ಕಂಡು ಬಂದಿದೆ. ಭಾರತದಲ್ಲಿ ಒಂದೇ ದಿನ 28 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 133 ದಿನಗಳಲ್ಲಿ 20,86,12,834 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 28,07,411 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 25,99,754 ಜನರಿಗೆ ಮೊದಲ ಡೋಸ್ ಹಾಗೂ 2,07,657 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 1,66,47,122 ಮಂದಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ಹಾಗೂ 275 ಮಂದಿಗೆ 2ನೇ ಡೋಸ್ ಲಸಿಕೆ ವಿತರಿಸಲಾಗಿದೆ.
ಭಾರತದಲ್ಲಿ ಈವರೆಗೂ 98,44,619 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 67,58,839 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,54,41,200 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 84,47,103 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,44,71,232 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,03,37,925 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,81,23,297 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,85,41,222 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
The cumulative number of COVID-19 vaccine doses administered in the country has crossed 20.86 crores, the Union Health Ministry said on Friday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm