ಬ್ರೇಕಿಂಗ್ ನ್ಯೂಸ್
02-06-21 12:56 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಜೂ. 02: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟ ಘಟನೆ ಗೊಂಡಾ ಸಮೀಪದ ಟಿಕ್ರಿ ಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ನೂರುಲ್ ಹಾಸನ್ ಎಂಬವರಿಗೆ ಸೇರಿದ ಎರಡು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಕಟ್ಟಡ ಕುಸಿದಿದೆ. ಸ್ಥಳದಲ್ಲೇ ಎಂಟು ಮಂದಿ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ‘ ಎಂದು ಜಿಲ್ಲಾಧಿಕಾರಿ ಮಾರ್ಕಂಡೇಯ ಶಾಹಿ ತಿಳಿಸಿದ್ದಾರೆ.
ಮೃತರನ್ನು ನಿಸಾರ್ ಅಹ್ಮದ್ (35), ರುಬಿನಾ ಬಾನೊ (32), ಶಂಶಾದ್ (28), ಸೈರುನಿಷಾ (35), ಶಹಬಾಜ್ (14), ನೂರಿ ಸಬಾ (12), ಮೆರಾಜ್ (11) ಮತ್ತು ಮೊಹಮ್ಮದ್ ಶೋಯಾಬ್ (2) ಎಂದು ಗುರುತಿಸಲಾಗಿದೆ.
ಘಟನೆಯ ಕಾರಣ ತನಿಖೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗ ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
Seven people died last night in a cylinder blast in Uttar Pradesh's Gonda district which also left seven others injured and brought down two houses.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm