ಬ್ರೇಕಿಂಗ್ ನ್ಯೂಸ್
05-06-21 05:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಹಂತ ಹಂತವಾಗಿ ಲಾಕ್ಡೌನ್ ತೆರವುಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ತಿಳಿಸಿದರು.
ಆನ್ಲೈನ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಬಂಧ ಸಡಿಲಗೊಳಿಸಿ ಹೊರಡಿಸಿರುವ ಆದೇಶ ಸೋಮವಾರದಿಂದ ಜಾರಿಗೆ ಬರಲಿದೆ. ಆ ಪ್ರಕಾರ, ಶೇ 50ರ ಪ್ರಯಾಣಿಕರೊಂದಿಗೆ ಮೆಟ್ರೊ ರೈಲು ಸಂಚಾರ ಮಾಡಲಿದೆ. ಸರಿ–ಬೆಸ ಸಂಖ್ಯೆಯ ಆಧಾರದಲ್ಲಿ ಮಾರುಕಟ್ಟೆಗಳು ಮತ್ತು ಮಾಲ್ಗಳು ತೆರೆಯಬೇಕೆಂದು ನಿಬಂಧನೆ ವಿಧಿಸಲಾಗಿದೆ ಎಂದು ತಿಳಿಸಿದರು.
ಸೋಮವಾರ ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಬೇಕಿದ್ದ ದೆಹಲಿಯ ಲಾಕ್ಡೌನ್ ಅನ್ನು ಕೆಲವೊಂದು ನಿಯಮಗಳನ್ನು ಸಡಿಸಲಿಸುವುದರೊಂದಿಗೆ ವಿಸ್ತರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

ಶೇ. 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರಯಲು ಅವಕಾಶ ನೀಡಲಾಗುವುದು. ಬೆಳಿಗ್ಗೆ 10 ರಿಂದ ರಾತ್ರಿ 8ರವರೆಗೆ ಬೆಸ-ಸಮ ಆಧಾರದಲ್ಲಿ ಮಾರುಕಟ್ಟೆಗಳು ಮತ್ತು ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದರು.
ನಿತ್ಯ 37 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಜತೆಗೆ, ದೆಹಲಿಯ ಆಸ್ಪತ್ರೆಯಲ್ಲಿರುವ ಐಸಿಯುಗಳ ಲಭ್ಯತೆ ಮತ್ತು ಔಷಧಗಳ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಕೊರೊನಾ ಮೂರನೇ ಅಲೆ ಎದುರಿಸಲು ದೆಹಲಿ ಸರ್ಕಾರ ಸಜ್ಜಾಗುತ್ತಿದೆ ಎಂದು ಹೇಳಿದರು.

‘ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದೆಂಬ ತಜ್ಞರ ಹೇಳಿಕೆಗಳ ಹಿನ್ನೆಲೆಯಲ್ಲಿ, ಮಕ್ಕಳಿಗೆ ಅಗತ್ಯವಿರುವ ಹಾಸಿಗೆಗಳು, ಐಸಿಯು ಸೌಲಭ್ಯಗಳು ಮತ್ತು ಇತರ ಉಪಕರಣಗಳ ವ್ಯವಸ್ಥೆಗಾಗಿ ‘ಮಕ್ಕಳ ಕಾರ್ಯಪಡೆ‘ ರಚಿಸಲಾಗಿದೆ‘ ಎಂದು ಅವರು ಮಾಹಿತಿ ನೀಡಿದರು.
ದೆಹಲಿಯಲ್ಲಿ 450 ಮೆಟ್ರಿಕ್ ಟನ್ ಆಮ್ಲಜನಕ ಸಂಗ್ರಹಿವಷ್ಟು ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ. 25 ಆಮ್ಲಜನಕ ಟ್ಯಾಂಕರ್ಗಳನ್ನು ಸರ್ಕಾರ ಖರೀದಿಸುತ್ತಿದೆ. 64 ಸಣ್ಣ ಆಮ್ಲಜನಕ ಘಟಕಗಳನ್ನು ಸ್ಥಾಪಿಸುತ್ತಿದೆ. ಕೋವಿಡ್ಗೆ ಚಿಕಿತ್ಸೆಗೆ ಸಂಬಂಧಿಸಿದ ಔಷಧಿಗಳ ದಾಸ್ತಾನು ಮಾಡುವುದಕ್ಕೂ ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದರು.
Delhi Chief Minister Arvind Kejriwal has announced further relaxations in lockdown. As per the announcement made on Saturday, markets will re-open in Delhi, and metro services will be resumed from June 7 with conditions.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm