ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.
ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.
ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm